ಅಂಗನವಾಡಿಗಳಿಗೆ ಆರ್‍ಟಿಸಿ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಪತ್ರಿಕಾ ಪ್ರಕಟಣೆ

ಮಂಗಳೂರು: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಈಗಾಗಲೇ ನಿವೇಶನ ಒದಗಿಸಿದ್ದು/ ಮಂಜೂರಾತಿ ನೀಡಿದ್ದು, ಇವುಗಳಿಗೆ ಇನ್ನು 15 ದಿನಗಳೊಳಗಾಗಿ ಆರ್‍ಟಿಸಿಯನ್ನು  ಒದಗಿಸುವಂತೆ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿ ಅವರು ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಇಂದು ತಮ್ಮ ಕಚೇರಿಯಲ್ಲಿ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದ್ರೆಯಲ್ಲಿ ಒಂದು ಹೆಣ್ಣು ಮಕ್ಕಳ ಮತ್ತು ಗಂಡು ಮಕ್ಕಳ ಮೆಟ್ರಿಕ್ ನಂತರದ ಹಾಸ್ಟೆಲ್ ಆರಂಭಿಸಲು ಸರ್ಕಾರ ತಲಾ ರೂ.50 ಲಕ್ಷ ಅನುದಾನ ಕಾಯ್ದಿರಿಸಿದೆ. ಆದ್ದರಿಂದ ಎರಡೂ ವಿದ್ಯಾರ್ಥಿ ನಿಲಯಗಳಿಗೆ ತಲಾ 1 ಎಕರೆ ಜಾಗ ಗುರುತಿಸಿಕೊಡಲು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸಂತೋಷ್ ಅವರು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

pilikula-craft-dc-20160322

ಜಿಲೆಯಲ್ಲಿ ನೂತನವಾಗಿ ರಚನೆಯಾಗಿರುವ ಗ್ರಾಮ ಪಂಚಾಯ್ತಿಗಳಿಗೆ ಸ್ವಂತ ಕಚೇರಿ ಕಟ್ಟಡ ಹೊಂದಲು ಕಂದಾಯ ಅಧಿಕಾರಿಗಳು ಸೂಕ್ತ ನಿವೇಶನಗಳನ್ನು ಗುರುತಿಸಿಕೊಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧೀಕಾರಿ ಪಿ.ಐ. ಶ್ರೀ.ವಿದ್ಯಾ ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಬೋವಿ ಜನಾಂಗದವರಿಗೆ ಝಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ನೀತಿ ಹಾಗೂ ನಿರಾಕರಿಸಲಾಗುತ್ತಿದೆ ಎಂಬ ಅಂಶ ಸರ್ಕಾರದ ಗಮನಕ್ಕೆ ಬಂದಿರುವುದರಿಂದ ಈ ವಿಷಯದಲ್ಲಿ ಗಂಭೀರವಾಗಿ ನಿರ್ದಾರ ಕೈಗೊಳ್ಳುವಂತೆ ಎಲ್ಲಾ ತಹಶೀಲ್ದಾರರಿಗೆ ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಕುಮಾರ ಇವರು ಸೂಚಿಸಿದರು.

ಸವ್ರೋಚ್ಚ ನ್ಯಾಯಾಲಯದ ತೀರ್ಪಿನಂತೆ ತಂದೆ ಒಂದು ಜಾತಿ, ತಾಯಿ ಒಂದು ಜಾತಿಗೆ ಸೇರಿದ ಅಂತರ್ಜಾತಿ ದಂಪತಿಗಳ  ಮಕ್ಕಳಿಗೆ ಜಾತಿ ಪ್ರಮಾಣ ಪತ್ರ ನೀಡುವಾಗ ತಂದೆಯ ಜಾತಿಯನ್ನೇ ಪರಿಗಣನೆಗೆ ತೆಗೆದುಕೊಳ್ಳುವಂತೆ ತಿಳಿಸಿದೆ ಎಂದು ಸಮಾಜ ಕಲ್ಯಾಣ ಅಧಿಕಾರಿ ಸಭೆಗೆ ಸ್ಪಷ್ಟೀಕರಣ ನೀಡಿದರು.

1 Comment

Leave a Reply