ಅಕ್ಟೋಬರ್ 3 ರಂದು ಜಿಲ್ಲೆಗೆ ಮುಖ್ಯಮಂತ್ರಿ: ಪೂರ್ವಭಾವಿ ಸಭೆ

ಅಕ್ಟೋಬರ್ 3 ರಂದು ಜಿಲ್ಲೆಗೆ ಸಿಎಂ: ಪೂರ್ವಭಾವಿ ಸಭೆ

ಮ0ಗಳೂರು: ಅಕ್ಟೋಬರ್ 3ರಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸುವ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಅ.3ರಂದು ಪುತ್ತೂರು ತಾಲೂಕಿನ ಕೊಯಿಲದಲ್ಲಿ ಪಶುವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದು, ಬಳಿಕ ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಲ್ಲಾ ಮಾಹಿತಿಗಳೊಂದಿಗೆ ಸಿದ್ಧರಾಗಿರುವಂತೆ ಸೂಚಿಸಿದರು. ಅಲ್ಲದೇ, ತಮ್ಮ ಪ್ರಗತಿ ವಿವರಗಳನ್ನು ಕೂಡಲೇ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಪ್ರಗತಿ ವಿವರಗಳನ್ನು ಪಡೆದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಹೆಚ್ಚುವರಿ ಎಸ್‍ಪಿ ವೇದಮೂರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply