ಆಗಸ್ಟ್ 15 ರಂದು ಜಿಲ್ಲೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿ ಘೋಷಣೆ-ಎ.ಬಿ.ಇಬ್ರಾಹಿಂ

ಮ0ಗಳೂರು: ರಾಜ್ಯದಲ್ಲೇ ಪ್ರಥಮ ಬಾರಿಗೆ ದ.ಕ.ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಕೈಜೋಡಿಸಿದಲ್ಲಿ ಇದೇ ಆಗಸ್ಟ್ 15ರಂದು ಜಿಲ್ಲೆಯನ್ನು ಅಧಿಕೃತವಾಗಿ ಘೋಷಿಸಲಾಗುವುದೆಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ.
ಅವರು ಇಂದು ತಮ್ಮ ಕಛೇರಿಯಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಆಚರಿಸುವ ಕುರಿತ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜೂನ್ 12ರಂದು ಬಾಲಕಾರ್ಮಿಕ ವಿರೋದಿ ದಿನಾಚರಣೆ ಅಂಗವಾಗಿ ಜಾಥಾ ಏರ್ಪಡಿಸುವಾಗ ಶಾಲಾ ಮಕ್ಕಳನ್ನು ಬಳಸಿಕೊಳ್ಳದೆ ಜಿಲ್ಲೆಯಲ್ಲಿರುವ ಕಾರ್ಮಿಕ ಸಂಘಟನೆಗಳ ಪದಾದಿಕಾರಿಗಳು, ಸದಸ್ಯರು ಸಕ್ರಿಯವಾಗಿ ಭಾಗವಹಿಸುವಂತೆ ಮನವೊಲಿಸಬೇಕೆಂದು ಜಿಲ್ಲಾಧಿಕಾರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ನಾಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ, ಮುಂತಾದವರು ಹಾಜರಿದ್ದರು.

Leave a Reply