ಆರೆಸ್ಸಸ್ ಕಾರ್ಯಕರ್ತನ ಹತ್ಯೆ ಖಂಡಿಸಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಆರೆಸ್ಸಸ್ ಕಾರ್ಯಕರ್ತನ ಹತ್ಯೆ ಖಂಡಿಸಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಮಂಗಳೂರು : ಬೆಂಗಳೂರಿನಲ್ಲಿ ನಡೆದ  ಆರೆಸ್ಸಸ್ ಕಾರ್ಯಕರ್ತನ ಕೊಲೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನಗರದಲ್ಲಿ ಪ್ರತಿಭಟನೆ ನಡೆಸಿತು.

image001bjp-protest-20161017-001 image002bjp-protest-20161017-002 image003bjp-protest-20161017-003 image004bjp-protest-20161017-004 image005bjp-protest-20161017-005 image006bjp-protest-20161017-006 image007bjp-protest-20161017-007 image008bjp-protest-20161017-008

ಈ ವೇಳೆ ಮಾತನಾಡಿದ ಸಂಘಟನೆಯ ನಾಯಕರು ಬೆಂಗಳೂರಿನಲ್ಲಿ ನಡೆದ ಆರೆಸ್ಸಸ್ ಪಥಸಂಚಲನದಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭದಲ್ಲಿ ಆರೆಸ್ಸಸ್ ಕಾರ್ಯಕರ್ತ ಆರ್.ರುದ್ರೇಶ್‍ರವರನ್ನು ಮಾರಕಾಯುಧದಿಂದ ಭೀಕರವಾಗಿ ಹತ್ಯೆ ನಡೆಸಲಾಗಿದೆ. ಕರ್ನಾಟಕದ ರಾಜಧಾನಿಯಲ್ಲಿ ಹಾಡುಹಗಲೇ ಈ ರೀತಿ ಕೃತ್ಯವು ರಾಜ್ಯ ಸರಕಾರದ ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ರಾಜ್ಯದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿಟ್ಟುಕೊಂಡು ಕಾಂಗ್ರೆಸ್ ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಿರಂತರವಾಗಿ ಹತ್ಯೆಗಳು ನಡೆಯುತ್ತಿವೆ. ಮಂಗಳೂರಿನ ಪ್ರಶಾಂತ್ ಪೂಜಾರಿ, ಮೈಸೂರಿನ ರಾಜು, ಕೊಡಗಿನ ಕೂಟ್ಟಪ್ಪ , ಈಗ ರುದ್ರೇಶ್ ಹತ್ಯೆಯಾದ ಸಂಘಟನೆಯ ಕಾರ್ಯಕರ್ತರು ಈ ರೀತಿಯಾಗಿ ಕಾಂಗ್ರೆಸ್ ಈ ರಾಜ್ಯವನ್ನು ಗೂಂಡ ರಾಜ್ಯವನ್ನಾಗಿ ಮಾಡಲು ಯತ್ನಿಸುತ್ತಿದೆ. ಈ ಭೀಕರ ಹತ್ಯೆಯನ್ನು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ತೀವ್ರವಾಗಿ ಖಂಡಿಸುತ್ತಿದ್ದು, ಸೂಕ್ತ ತನಿಖೆ ನಡೆಸಿ ಶೀಘ್ರ ಆರೋಪಿಗಳ ಬಂಧನ ಅಗ್ರಹಿಸಿ ರುದ್ರೇಶ್‍ರವರ ಕುಟುಂಬಕ್ಕೆ ನ್ಯಾಯ ಮತ್ತು ಸೂಕ್ತ ಪರಿಹಾರ ಒದಗಿಸಬೇಕೆಂದು ಅಗ್ರಹಿಸುತ್ತದೆ.

ಪ್ರತಿಭಟನೆಯ ನೇತ್ರತ್ವವನ್ನು ಬಿಜೆಪಿ ಯುವ ಮೋರ್ಚಾ ದ.ಕ ಅಧ್ಯಕ್ಷ ಹರೀಶ್ ಪೂಂಜ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ,, ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಥ್ವಿರಾಜ್ ಯು.ಬಿ.ಬಂಗೇರ, , ಜಿಲ್ಲಾ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಮರವೂರು, ಜಿಲ್ಲಾ ಕಾರ್ಯದರ್ಶಿ ಗಳಾದ ಭರತ್ ಈಶ್ವರಮಂಗಲ, ಕಿಶೋರ ಬಾಬು, ದಯಾನಂದ ಕೊಣಾಜೆ, ಸುದರ್ಶನ್ ಪೂಜಾರಿ, ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಸುಜೀತ್ ಮಾಡೂರು, ಯಶಪಾಲ್, ಸುನೀಲ್, ಅನೀಸ್, ಅಭಿಲಾಷ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶೆಟ್ಟಿ, ಲೋಹಿತ್ ಪೂಜಾರಿ, ದೇವಿಕಿರಣ್ ಕುಲಾಲ್, ಸಂತೋಷ ಕೈಕರ, ಸಂತೋಷ ಬಂಟ್ವಾಳ, ನಂದನ ಮಲ್ಯ, ಸಚಿನ್‍ಶೆಟ್ಟಿ ಉಪಸ್ಥಿತರಿದ್ದರು.

Leave a Reply

Please enter your comment!
Please enter your name here