ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮಂಗಳೂರು : ಮಹಿಳೆಯರ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉರ್ವಾ ಪೋಲಿಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Urwa-Rohit-Kumar-19062016

ಬಂಧಿತರನ್ನು ಬೋಳಾರದ ಬತ್ತೇರಿ ಗಾರ್ಡನ್‌ ನಿವಾಸಿ ರೋಹಿತ್‌ ಕುಮಾರ್‌ (26) ಮತ್ತು ನಗರದ ಪ್ರಜ್ವಲ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಕುತ್ತಿಗೆಯಿಂದ ಸರವನ್ನು ಕಸಿದು ಪರಾರಿಯಾಗುತ್ತಿದ್ದ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಪಿಗಳ ಬೆನ್ನು ಹತ್ತಿದ್ದ ಪೊಲೀಸರು ಇಬ್ಬರನ್ನು ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಸೆರೆ ಹಿಡಿದಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ನಗರದ ಬರ್ಕೆ, ಉರ್ವಾ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಕಳವಾದ ಚಿನ್ನಭಾರಣಗಳು ಸೇರಿವೆ. ಈತ ಕಳವುಗೈದಿದ್ದ ಚಿನ್ನವನ್ನು ಪ್ರಜ್ವಲ್‌ ಶೆಟ್ಟಿಯೊಂದಿಗೆ ಮಾರಾಟ ಮಾಡಲು ನಗರಕ್ಕೆ ಬಂದಿದ್ದ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಬಳಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಅವರಿಂದ 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Please enter your comment!
Please enter your name here