ಉಡುಪಿ: ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ

ಉಡುಪಿ: 10 ನೇ ಅಂತರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವ ಉಡುಪಿ ಜಿಲ್ಲೆಯಲ್ಲಿ ಆಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವರಾದ ವಿ£ಯ ಕುಮಾರ್ ಸೊರಕೆ, ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್, ಜಿಲ್ಲಾ ಪಂಚಾಯತ್ ಸಿಇಒ ಎಂ. ಕನಗವಲ್ಲಿ ಉಪಸ್ಥಿತರಿದ್ದರು. ಮಕ್ಕಳ ಚಲನ ಚಿತ್ರೋತ್ಸವ ಸಮಿತಿ ಸದಸ್ಯರಾದ ಪಿ.ವಿ. ಮೋಹನ್, ಎಂ.ಎ ಗಫೂರ್, ಕಾರ್ಯಕ್ರಮ ಕುರಿತ ರೂಪುರೇಷೆಗಳನ್ನು ಸಭೆಯಲ್ಲಿ ವಿವರಿಸಿದರು. ಚಲನಚಿತ್ರ ಮಂದಿರಗಳ ವ್ಯವಸ್ಥಾಪಕರು, ಚಿತ್ರೋತ್ಸವ ಸಂಬಂಧಿಸಿದ ವಿವಿಧ ಸಮಿತಿಗಳ ಅಧ್ಯಕ್ಷರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply