ಉಡುಪಿ: ಗೃಹರಕ್ಷಕ ದಳ – ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ

ಉಡುಪಿ: ಉಡುಪಿ ಜಿಲ್ಲಾ ಗೃಹ ರಕ್ಷಕದಳ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ -2015 ರ ಉದ್ಘಾಟನಾ ಸಮಾರಂಭವು ಜನವರಿ 4 ರಂದು ಸಂಜೆ 4 ಗಂಟೆಗೆ ಎಮ್‍ಐಟಿ ಕ್ರೀಡಾಂಗಣ ಮಣಿಪಾಲ ಇಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪ್ರಮೋದ್ ಮಧ್ವರಾಜ್ ವಹಿಸುವರು. ಅಧ್ಯಕ್ಷತೆಯನ್ನು ಉಡುಪಿ ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾದ ಡಾ. ಹೆಚ್. ಎಸ್. ಬಲ್ಲಾಳ್, ಸಾಯಿರಾಧ ಗ್ರೂಪ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ಮನೋಹರ್ ಶೆಟ್ಟಿ ಹಾಗು ಮತ್ತಿತರ ಗಣ್ಯರು ಉಪಸ್ಥಿತರಿರುವರು.

ಸಮಾರೋಪ ಸಮಾರಂಭವು ಜನವರಿ 6 ರಂದು ಸಂಜೆ 4 ಗಂಟೆಗೆ ನಡೆಯಲಿದ್ದು ಸಮಾರೋಪ ಭಾಷಣ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವನ್ನು ರಾಜ್ಯ ನಗರಾಭಿವೃದ್ಧಿ ಸಚಿವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ನೆರವೇರಿಸುವರು. ಅಧ್ಯಕ್ಷತೆಯನ್ನು ಉಡುಪಿ ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ ವಹಿಸುವರು.

ಅತಿಥಿಗಳಾಗಿ ಗೃಹ ರಕ್ಷಕದಳದ ಆರಕ್ಷಕ ಉಪ ಮಹಾ ಸಮಾದೇಷ್ಟರಾದ ಆರ್ ರಂಗಸ್ವಾಮಿ ನಾಯಕ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ಕೆ., ಉಜ್ವಲ್ ಡೆವಲಪರ್ಸ್ ನ ಪುರುಷೋತ್ತಮ್ ಶೆಟ್ಟಿ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿರುವರು.

Leave a Reply

Please enter your comment!
Please enter your name here