ಉಡುಪಿ : ಜನವರಿ 27ರಂದು ‘ನ್ಯೂಸ್ ವಿಚ್ ಮ್ಯಾಟರ್ಸ್’ ಮಾಧ್ಯಮ ಕಾರ್ಯಾಗಾರ

ಉಡುಪಿ : ಜಿಲ್ಲಾಡಳಿತ ಉಡುಪಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜನವರಿ 27ರಂದು ಬೆಳಗ್ಗೆ 10.30 ಗಂಟೆಗೆ ‘ನ್ಯೂಸ್ ವಿಚ್ ಮ್ಯಾಟರ್ಸ್’ ಮಾಧ್ಯಮ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ ವಿಶಾಲ್ ಆರ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್ ವಹಿಸುವರು.
ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಉಪಸ್ಥಿತರಿರುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ, ದ ಹಿಂದೂ ದಿನಪತ್ರಿಕೆಯ ಸೀನಿಯರ್ ಅಸಿಸ್ಟಂಟ್ ಎಡಿಟರ್ ಬಿ.ಎಸ್. ಸತೀಶ್ ಕುಮಾರ್, ಪ್ರಜಾ ಟಿವಿಯ ಸೀನಿಯರ್ ಕರೆಸ್ಪಾಂಡೆಂಟ್ ಜ್ಯೋತಿ ಇರ್ವತ್ತೂರು ಪಾಲ್ಗೊಳ್ಳುವರು.
ಎಲ್ಲ ಅಧಿಕಾರಿಗಳು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಆಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Leave a Reply