ಉಡುಪಿ ಜಿಲ್ಲಾಧಿಕಾರಿಯವರಿಂದ ಮತದಾನ ಆಮಂತ್ರಣ

Spread the love

ಉಡುಪಿ ಜಿಲ್ಲಾಧಿಕಾರಿಯವರಿಂದ ಮತದಾನ ಆಮಂತ್ರಣ

ಉಡುಪಿ ಜಿಲ್ಲೆಯ ಆತ್ಮೀಯ ಮತದಾರ ಬಂಧುಗಳೇ ,

ನಮ್ಮದು ಜಗತ್ತಿನಲ್ಲಿ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಹಲವಾರು ಭಾಷೆ, ಜನಾಂಗ, ಸಂಸ್ಕøತಿ, ಧರ್ಮ ಹೊಂದಿರುವ ನಾವೆಲ್ಲರೂ ಒಂದು ಎಂಬ ಭಾವನೆಯಿಂದ ಬದುಕುತ್ತಿದ್ದೇವೆ. ಆದ್ದರಿಂದ ವಿಶ್ವದಲ್ಲಿ ನಮ್ಮದು ಬೃಹತ್ ಪ್ರಜಾ ಸತ್ತಾತ್ಮಕ ಜಾತ್ಯಾತೀತ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ.

ಮತದಾರ ಬಂದುಗಳೇ, ನಮ್ಮ ದೇಶಕ್ಕೆ ಸುಭದ್ರ ಸರ್ಕಾರವನ್ನು ಆಯ್ಕೆ ಮಾಡಲು ಇದೇ ಏಪ್ರಿಲ್ 18 ರ ಗುರುವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ತಾವು ಹಾಗೂ ತಮ್ಮ ಕುಟುಂಬದ ಅರ್ಹ ಮತದಾರರು ಮತಗಟ್ಟೆಗೆ ಬಂದು ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕಿದೆ.

ಈ ಚುನಾವಣೆಯಲ್ಲಿ ಎಲ್ಲರನ್ನೂ ಒಳಗೊಂಡ ಸುಲಭ ಸಾಧ್ಯವಾದ ನೈತಿಕ ಮತದಾನ ಕ್ಕೆ ಒತ್ತು ಕೊಡಬೇಕಾಗಿದೆ. ಆದ್ದರಿಂದ ನಮ್ಮ ಜಿಲ್ಲೆಯಲ್ಲಿ ವಿಶೇಷ ಚೇತನರಿಗೆ, ಮಹಿಳೆಯರಿಗೆ ಹಾಗೂ ಹಿರಿಯ ನಾಗರೀಕ ಬಂಧುಗಳಿಗೆ ಮತಗಟ್ಟೆಯಲ್ಲಿ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದೆ. ವಿಶೇಷಚೇತನರಿಗೆ ಮನೆಯಿಂದ ಕರೆದುಕೊಂಡು ಬಂದು ಮತದಾನ ಮಾಡಿ ವಾಪಸ್ ತೆರಳಲು ವಾಹನ ವ್ಯವಸ್ಥೆ ಮತ್ತು ಸಹಾಯಕರನ್ನು ನೇಮಿಸಲಾಗಿದೆ.

ಆದ್ದರಿಂದ, ನಾಡಿನ ಪ್ರಗತಿಯನ್ನು ದೃಢಪಡಿಸುವ ನಿಟ್ಟಿನಲ್ಲಿ, ಯಾವುದೇ ಆಸೆ ಆಮಿಷಗಳಿಗೆ ಹಾಗೂ ಯಾವುದೇ ಪ್ರಭಾವಗಳಿಗೆ , ತಮ್ಮ ಒಳಗಾಗದೇ, ಕರ್ತವ್ಯಗಳನ್ನು ನಿರ್ವಹಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದ್ದಾರೆ.

“ಮತದಾನ ನಿಮ್ಮ ಹಕ್ಕು ಹಾಗೂ ನಿಮ್ಮ ಜವಾಬ್ದಾರಿ , ತಪ್ಪದೇ ಮತ ಚಲಾಯಿಸಿ”


Spread the love