ಉಡುಪಿ: ಪೇಜಾವರ ಪರ್ಯಾಯ- ವಿಶೇಷ ಅಂಚೆ ಚೀಟಿ ಬಿಡುಗಡೆ

ಉಡುಪಿ: ಭಾರತೀಯ ಅಂಚೆ ಇಲಾಖೆ ಮತ್ತು ಉಡುಪಿ ಪೇಜಾವರ ಪರ್ಯಾಯೋತ್ಸವ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಐತಿಹಾಸಿಕ ದಾಖಲೆಯಾಗಿ 5 ನೇ ಬಾರಿ ಪೀಠೊರೋಹಣ ಮಾಡುತ್ತಿರುವ ವಿಶ್ವೇಶ್ವರತೀರ್ಥ ಸ್ವಾಮೀಜಿಯವರ ಪರ್ಯಾಯೋತ್ಸವದ ಸವಿನೆನಪಿಗಾಗಿ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮವನ್ನು ಜನವರಿ 4 ರಂದು ರಾತ್ರಿ 7.30 ಗಂಟೆಗೆ ಉಡುಪಿ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ಜರುಗಲಿರುವ ಪುರಪ್ರವೇಶ ಮತ್ತು ಪೌರಸಮ್ಮಾನ ಸಮಾರಂಭದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಸ್ ರಾಜೇಂದ್ರ ಕುಮಾರ್ ರವರು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Leave a Reply