ಉಡುಪಿ ಬ್ಲಾಕ್ ಕಾಂಗ್ರೆಸ್ ಐಟಿ ಘಟಕದ ಅಧ್ಯಕ್ಷರಾಗಿ ನೀರಜ್ ಪಾಟೀಲ್

ಉಡುಪಿ ಬ್ಲಾಕ್ ಕಾಂಗ್ರೆಸ್ ಐಟಿ ಘಟಕದ ಅಧ್ಯಕ್ಷರಾಗಿ ನೀರಜ್ ಪಾಟೀಲ್

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಐಟಿ (ಮಾಹಿತಿ ಮತ್ತು ತಂತ್ರಜ್ಞಾನ) ಘಟಕದ ಅಧ್ಯಕ್ಷರಾಗಿ ಯುವ ಕಾಂಗ್ರೆಸ್ ಕಾರ್ಯಕರ್ತ ನೀರಜ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

neeraj-pateel

ಕಾಂಗ್ರೆಸಿನ ಸಕ್ರಿಯ ಕಾರ್ಯಕರ್ತರಾಗಿರುವ ನೀರಜ್ ಪಾಟೀಲ್ ಅವರನ್ನು ಐಟಿ ಘಟಕದ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಯುವಜನ, ಕ್ರೀಡೆ ಹಾಗೂ ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್ ಶಿಫಾರಸ್ಸಿನ ಮೇರೆಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ನೇಮಕ ಮಾಡಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಪಕ್ಷದ ಮಾರ್ಗದರ್ಶನದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಮತ್ತು ವಿಚಾರಗಳನ್ನು ಸಾಮಾಜಿಕ ಜಾಲತಾಣದ ಮೂಲಕ ವ್ಯವಸ್ಥಿತವಾಗಿ ಪ್ರಚಾರ ಮಾಡಬೇಕಾಗಿ ನೇಮಕ ಪತ್ರದಲ್ಲಿ ನೀರಜ್ ಪಾಟೀಲ್ ಅವರಿಗೆ ಸೂಚಿಸಲಾಗಿದೆ.

Leave a Reply