ಉಡುಪಿ: ಹಿರಿಯ ನಾಗರಿಕರ ರಕ್ಷಣೆ ಸಾಮಾಜಿಕ ಕರ್ತವ್ಯ – ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್

Spread the love

ಉಡುಪಿ: ಹಿರಿಯ ನಾಗರಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರನ್ನು ಗೌರವಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.
ಅವರು ಇಂದು ಅಜ್ಜರಕಾಡು ಪುರಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ. ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಪಾಲಕರು, ಪೋಷಕರು ಮತ್ತು ಹಿರಿಯ ನಾಗರಿಕರಲ್ಲಿ ಗೌರವ ಮೂಡಿಸುವ ಸಲುವಾಗಿ, ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ceo-udupi-08-02-2016

ಪ್ರಸ್ತುತ ಆಧುನಿಕ ಜಗತ್ತಿನ ಐಶಾರಾಮಿ ಜೀವನದ ಹಿಂದೆ ಬಿದ್ದು, ಹಿರಿಯ ನಾಗರೀಕರನ್ನು ಕಡೆಗಣಿಸಲಾಗುತ್ತಿದೆ, ಆದರೆ ಹಿರಿಯ ನಾಗರೀಕರ ಅನುಭವ, ಜೀವನ ಮೌಲ್ಯಗಳು ಸದಾ ಕಾಲ ಅನುಕರಣೀಯ. ಸಮಾಜದಲ್ಲಿ ವೃದ್ದಾಶ್ರಮಗಳ ಸಂಖ್ಯೆ ಅಧಿಕವಾಗುತ್ತಿದೆ ಇದು ಉತ್ತಮವಾದ ಬೆಳವಣಿಗೆ ಅಲ್ಲ, ವಯಸ್ಸಾದ ಮೇಲೆ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳು ಬರುವುದು ಸಹಜ ಅದನ್ನು ಅರ್ಥಮಾಡಿಕೊಳ್ಳಬೇಕು, ಹಿರಿಯ ನಾಗರಿಕರ ರಕ್ಷಣೆ ಸಾಮಾಜಿಕ ಕರ್ತವ್ಯ ಕೂಡಾ, ಹಿರಿಯರ ಭಾವನೆಗಳನ್ನು ಅರಿತುಕೊಂಡು ಗೌರವ ನೀಡಬೇಕು , ಇಲ್ಲವಾದಲ್ಲಿ ನಮ್ಮ ಮಕ್ಕಳೂ ಸಹ ಹಿರಿಯರಾದ ಮೇಲೆ ನಮ್ಮನ್ನು ಗೌರವಿಸುವುದಿಲ್ಲ ಎಂದು ಸಿಇಓ ಹೇಳಿದರು.
ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಜಿನ ಪ್ರಾಂಶುಪಾಲ ಬಿ.ಜಗದೀಶ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಅಧಿಕಾರಿ ನಿರಂಜನ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಜಯಲಕ್ಷ್ಮಿ ವಂದಿಸಿದರು.
ಜಿಲ್ಲೆಯ 10 ಕ್ಕೂ ಹೆಚ್ಚು ಕಾಲೇಜಿನ ವಿದ್ಯಾರ್ಥಿಗಳು ಭಾಷಣ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.


Spread the love