ಉತ್ತರಪ್ರದೇಶದ ಆರ್ಯನ್ ಹೋಟೆಲ್ ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

Spread the love

ಅಲಹಾಬಾದ್: ಉತ್ತರಪ್ರದೇಶದ ಪ್ರತಾಪ್ಘರ್ ನಲ್ಲಿರುವ ಆರ್ಯನ್ ಹೋಟೆಲ್ ನಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 5 ರ ಸುಮಾರಿಗೆ ಇದ್ದಕ್ಕಿದ್ದಂತೆ ಹೋಟೆಲ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಹೋಟೆಲ್ ನಲ್ಲಿದ್ದ 10 ಮಂದಿ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಅಥಿಕಾರಿಗಳು ತಿಳಿಸಿದ್ದಾರೆ.

ಹೋಟೆಲ್ ನಲ್ಲಿ 40 ರಿಂದ 50ಕ್ಕೂ ಹೆಚ್ಚು ಮಂದಿ ಇದ್ದು, ಘಟನೆಗೆ ಈ ವರೆಗೂ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿರುವ ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೃತ ವ್ಯಕ್ತಿಗಳ ಗುರುತು ಈ ವರೆಗೂ ಪತ್ತೆಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಘಟನೆ ಕುರಿತಂತೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ ಎಂದು ತಿಳಿದುಬಂದಿದೆ.


Spread the love