ಕಾಪು: ಪ್ರಗತಿ ನಗರದಲ್ಲಿ ಪ್ರಮೋದ್ ಮಧ್ವರಾಜ್‍ ಚುನಾವಣಾ ಪ್ರಚಾರ ಸಭೆ

31

ಪ್ರಗತಿ ನಗರದಲ್ಲಿ ಪ್ರಮೋದ್ ಮಧ್ವರಾಜ್‍ ಚುನಾವಣಾ ಪ್ರಚಾರ ಸಭೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆ.ಡಿ.ಎಸ್. ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್‍ರವರು ಕಾಪು ವಿಧಾನಸಭಾ ಕ್ಷೇತ್ರದ ಪ್ರಗತಿ ನಗರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.

ಈ ಸಭೆಯಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಸಾರ್ವಜನಿಕರಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಲೆವೂರು ಹರೀಶ್ ಕಿಣಿ, ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ವಲಯ ಅಧ್ಯಕ್ಷರಾದ ನವೀನ್‍ಚಂದ್ರ ಸುವರ್ಣ, ಕಾಪು ಬ್ಲಾಕ್ ಉತ್ತರ ವಲಯ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಕಾಪು ಬ್ಲಾಕ್ ಉತ್ತರ ವಲಯ ವೀಕ್ಷಕರಾದ ಮಹಾಬಲ ಕುಂದರ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.