ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ವಂಚನೆ : ಮೆಸ್ಕಾಂ ಎಇಇ ಬಂಧನ

ಕುಂದಾಪುರ: ಕಳೆದ ಎಂಟು ವರ್ಷಗಳಿಂದ ಮದುವೆಯಾಗುವುದಾಗಿ ನಂಬಿಸಿ ಯುತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಮೆಸ್ಕಾಂ ಇಲಾಖೆಯ ಅಸಿಸ್ಟೆಂಟ್ ಎಕ್ಸ್‍ಕ್ಯೂಟಿವ್ ಇಂಜಿನಿಯರ್ ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಭಾನುವಾರ ನಡೆದಿದೆ. ಬಂಧಿತ ಆರೋಪಿಯನ್ನು ಎಇಇ ರಾಕೇಶ್ ಎಂದು ಗುರುತಿಸಲಾಗಿದೆ.

ಕುಮುಟಾ ಮೂಲದ ಯುವತಿಯೊಂದಿಗೆ ಕಳೆದ ಎಂಟು ವರ್ಷಗಳಿಂದ ಕುಮುಟಾ ಮೂಲದ ಪ್ರಸ್ತುತ ಉಡುಪಿ ವಿಭಾಗದ ಅಸಿಸ್ಟೆಂಟ್ ಎಕ್ಸ್‍ಕ್ಯೂಟಿವ್ ಇಂಜಿನಿಯರ್ ಆಗಿರುವ ರಾಕೇಶ್‍ಗೆ ಪ್ರೇಮ ಸಲ್ಲಾಪ ನಡೆದಿತ್ತು. ಈತ ಮೊದಲು ಕುಂದಾಪುರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಲವು ಬಾರಿ ವಿವಿಧ ಕಡೆಗೆ ಆರೋಪಿ ರಾಕೇಶ್ ಯುವತಿಯನ್ನು ಕರೆದೊಯ್ದು ಲೈಂಗಿಕ ಕ್ರಿಯೆ ನಡೆಸಿದ್ದು, ಆಕೆಯನ್ನು ಮದುವೆಯಾಗುವುದಾಗಿಯೂ ನಂಬಿಸಿದ್ದ, ನಂತರ ಮದುವೆಯಾಗುವುದಿಲ್ಲ ಎಂದು ವಂಚಿಸಿದ್ದಾನೆ ಎಂದು ಯುವತಿ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ಪ್ರಕರಣ ದಾಖಲಿಸಿಕೊಂಡ ಅಮಾಸೆಬೈಲು ಪೊಲೀಸರು ಕುಂದಾಪುರ ಪೊಲೀಸರ ಸಹಕಾರದಲ್ಲಿ ಆರೋಪಿ ರಾಕೇಶನನ್ನು ಕುಂದಾಪುರದ ಆತನ ಮನೆಯಿಂದ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿ ರಾಕೇಶ್‍ಗೆ ನ್ಯಾಯಾಂಗ ಬಂಧನ ವಿಧಿಸಿದೆ.

 

Leave a Reply