ಕುಂದಾಪುರ : ಮರವಂತೆ ಹೊರಬಂದರಿಗೆ ಸಂಸದ ಯಡಿಯೂರಪ್ಪ ಭೇಟಿ

ಕುಂದಾಪುರ : ಮರವಂತೆಯಲ್ಲಿ ನಿರ್ಮಾಣ ಹಂತದಲ್ಲಿ ಕಳೆಪಯಾಗುತ್ತಿರುವ ಹೊರಬಂದರು ಪ್ರದೇಶಕ್ಕೆ ಮಾಜೀ ಮುಖ್ಯಮಂತ್ರಿ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸ್ಥಳೀಯ ಮುಖಂಡರಾದ ರಾಮಮಂದಿರ ಮೀನುಗಾರರ ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಹೊರಬಂದರಿನ ಸಮಸ್ಯೆಗಳ ಬಗ್ಗೆ ಸಂಸದರಿಗೆ ವಿವರಿಸಿದರು. ಈ ಸಂದರ್ಭ ಮಾತನಾಡಿದ ಸಂಸದ ಯಡಿಯೂರಪ್ಪ ಈ ಬಗ್ಗೆ ಕಾಮಗಾರಿಯನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. ಇದೇ ಸಂದರ್ಬ ಮರವಂತೆಯಲ್ಲಿ ಕಡಲ್ಕೊರೆತದ ಭೀತಿ ಎದುರಿಸುವ ಸ್ಥಳಗಳನ್ನೂ ಸಂಸದರು ಭೇಟಿ ನೀಡಿ ಪರಿಶೀಲಿಸಿದರು.

BSY 1 BSY

ನಂತರ ಹೊರಬಂದರು ಕಾಮಗಾರಿ ಕಚೇರಿಯ ಮುಂದೆ ಮೀನುಗಾರಿಕೆ ಹಾಗೂ ಬಂದರು ಅಧಿಕಾರಿ ರಾಥೋಡ್ ಅವರೊಂದಿಗೆ ಕಮಾಗಾರಿಯ ಪ್ರಗತಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಂಸದರು, ಆದಷ್ಟು ಶೀಘ್ರ ಕಾಮಗಾರಿ ಮುಗಿಸಲು ಕ್ರಕೈಗೊಳ್ಳುವಂತೆ ಮತ್ತು ಖಲಪೆ ಕಾಮಗಾರಿ ನಡೆಯದಂತೆ ಎಚ್ಚರಿಕೆ ನೀಡಿದರು.

ಈ ಸಂದರ್ಭ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ, ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾಧ್ಯಕ್ಷ ತಿಂಗಳೆ ವಿಕ್ಮಾರ್ಜುನ ಹೆಗ್ಡೆ, ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಕಾರ್ಯದರ್ಶಿ ಗುರುರಾಜ್ ಗಂಟಿಹೊಳೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Please enter your comment!
Please enter your name here