ಕೃಷಿ ಅಭಿಯಾನಕ್ಕೆ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಚಾಲನೆ

ಕೃಷಿ ಅಭಿಯಾನಕ್ಕೆ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಚಾಲನೆ 

ಮ0ಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿರುವ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕೃಷಿ ಅಭಿಯಾನ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿದರು.

krishi-abhiyana-mangalore

ಈ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ.ಶ್ರೀವಿದ್ಯಾ, ಉಪಕಾರ್ಯದರ್ಶಿ ಎನ್.ಆರ್ ಉಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಉಪಸ್ಥಿತರಿದ್ದರು.

20 ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಕೃಷಿಕರಿಗೆ ವಿವಿಧ ಮಾಹಿತಿಗಳನ್ನು ನೀಡಲಾಗುವುದು. ಕೃಷಿಯಾಂತ್ರೀಕರಣ, ಲಘು ನೀರಾವರಿ ಯೋಜನೆ, ಕೃಷಿ ಯಂತ್ರೋಪಕರಣಗಳ ಬಾಡಿಗೆ, ಸಾವಯವ ಕೃಷಿ, ಭೂಚೇತನ ಯೋಜನೆ, ಕೃಷಿಭಾಗ್ಯ ಯೋಜನೆ, ಕೃಷಿ ಸಾಲಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಈ ಅಭಿಯಾನದಲ್ಲಿ ನಡೆಸಲಾಗುವುದು ಎಂದು ವಾರ್ತಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Please enter your comment!
Please enter your name here