ಗಣೇಶೋತ್ಸವ:-ಬಾರ್, ವೈನ್ ಶಾಪ್ ಬಂದ್

ಗಣೇಶೋತ್ಸವ:-ಬಾರ್, ವೈನ್ ಶಾಪ್ ಬಂದ್

ಮ0ಗಳೂರು :- ಸೆಪ್ಟಂಬರ್ 5 ರಿಂದ 11ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಣೇಶೋತ್ಸವ ಹಬ್ಬದ ಪ್ರಯುಕ್ತ ನಡೆಯುವ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವೈಭವದ ಶೋಭಾಯಾತ್ರೆ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷಿಯಿಂದ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್/ ಮದ್ಯ ಮಾರಾಟ ಕೇಂದ್ರಗಳನ್ನು ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆಯುವ ದಿನದಂದು ಸೂಚಿಸಿದ ಸಮಯದ ತನಕ ಅವಧಿಯನ್ನು ಮದ್ಯಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಲಾಗಿದೆ.

ಸದರಿ ದಿನಗಳಂದು ಕರ್ನಾಟಕ ಅಬಕಾರಿ ಕಾಯ್ದೆ 1965 ರಡಿ ಕಾರ್ಯಾಚರಿಸುತ್ತಿರುವ ಸನ್ನದು ಆವರಣಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಹಾಗೂ ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ ಆದೇಶ ಹೊರಡಿಸಿದ್ದಾರೆ. ¨
ಈ ನಿಷೇದಾಜ್ಞೆ ಅವಧಿಯಲ್ಲಿ ವೈನ್ ಶಾಪ್ ಮತ್ತು ಬಾರ್‍ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಸೀಲುಗಳನ್ನು ಕಡ್ಡಾಯವಾಗಿ ಹಾಕಿ, ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅಬಕಾರಿ ಇಲಾಖೆಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Leave a Reply

Please enter your comment!
Please enter your name here