ಗೂಂಡಾ ಕಾಯ್ದೆಯಡಿಯಲ್ಲಿ ಇಬ್ಬರ ಬಂಧನ

ಮಂಗಳೂರು: ದರೋಡೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೋಲಿಸರು ಗೂಂಡಾ ಕಾಯ್ದೆಯಡಿಯಲ್ಲಿ ಈ ಕೆಳಗಿನ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪಡುಮಾರ್ನಾಡು ನಿವಾಸಿ ಕಿರಣ್ ಶೆಟ್ಟಿ (27) ಹಾಗೂ ತೋಡಾರು ನಿವಾಸಿ ಮೊಹಮ್ಮದ್ ಶರೀಫ್ (45) ಎಂದು ಗುರುತಿಸಲಾಗಿದೆ.

ಕಿರಣ ಶೆಟ್ಟಿ ವಿರುದ್ದ ಎರಡು ಕೊಲೆಗೆ ಯತ್ನ ಪ್ರಕರಣ, ಒಂದು ದರೋಡೆಗೆ ಯತ್ನ ಪ್ರಕರಣ ಮತ್ತು ಒಂದು ಬಲಾದ್ಗ್ರಹಣ ಪ್ರಕರಣ ಹೀಗೆ ಒಟ್ಟು ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹದಲ್ಲಿರಿಸಲಾಗಿದೆ.

ಮೊಹಮ್ಮದ್ ಶರೀಪ್ವಿರುದ್ದ ಒಂದು ಕೊಲೆ ಪ್ರಕರಣ ಮತ್ತು ಮೂರು ಕೊಲೆಯತ್ನ ಪ್ರಕರಣ ಹೀಗೆ ಒಟ್ಟು ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಜೈಲಿಗೆ ಕಾರಾಗೃಹದಲ್ಲಿರಿಸಲಾಗಿದೆ.

ಪೊಲೀಸ್ ನಿರೀಕ್ಷಕರು ಮೂಡಬಿದ್ರೆ ಪೊಲೀಸ್ ಠಾಣೆ, ಸಹಾಯಕ ಪೊಲೀಸ್ ಆಯುಕ್ತರು ಉತ್ತರ ಉಪ ವಿಭಾಗ ಮತ್ತು ಉಪ ಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರ ಇವರುಗಳ ವರದಿಯ ಆಧಾರದ ಮೇರೆಗೆ ಪೊಲೀಸ್ ಆಯುಕ್ತರು ಮಂಗಳೂರು ನಗರ ಇವರು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದ ಆಜ್ಞೆಯನ್ನು ಹೊರಡಿಸಿರುತ್ತಾರೆ.

Leave a Reply

Please enter your comment!
Please enter your name here