ಜನಸ್ನೇಹಿ ಪೋಲಿಸ್ ವ್ಯವಸ್ಥೆಗಾಗಿ ನೇರ ಫೋನ್ ಇನ್ ಕಾರ್ಯಕ್ರಮ

ಜನಸ್ನೇಹಿ ಪೋಲಿಸ್ ವ್ಯವಸ್ಥೆಗಾಗಿ ನೇರ ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ಜನಸ್ನೇಹಿ ಪೊಲೀಸ್ ಹಾಗೂ ಜನರೊಂದಿಗೆ ನಿರಂತರ ಸಂಪರ್ಕದೊಂದಿಗೆ ಜನಸಾಮಾನ್ಯರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಚಂದ್ರಸೇಖರ್ ಐ.ಪಿ.ಎಸ್, ಪೊಲೀಸ್ ಆಯುಕ್ತರು ಮಂಗಳೂರು ನಗರರವರು ಅಗಸ್ಟ್ 5 ರಂದು ಬೆಳಿಗ್ಗೆ 10-00 ಗಂಟೆಯಿಂದ 11-00 ಗಂಟೆಯ ವರೆಗೆ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ನೇರ ಪೋನ್ ಇನ್ ಕಾರ್ಯಕ್ರಮ ಏರ್ಪಡಿಸಿರುತ್ತಾರೆ. ಈ ಕಾರ್ಯಕ್ರಮ ಪ್ರತಿ ಶುಕ್ರವಾರ ಮುಂದುವರಿಯಲಾಗುತ್ತದೆ.

image001ccb-police-seize-51-kg-ganja-one-arrested-20160804-001

ಕೇಂದ್ರ ಕಛೇರಿಯಲ್ಲಿ ಆಯುಕ್ತರು ಇದ್ದ ಸಮಯದಲ್ಲಿ ನೇರ ಸಾರ್ವಜನಿಕರ ಸಮಸ್ಯೆಗಳಿಗೆ, ಪ್ರಶ್ನೆಗಳಿಗೆ ಉತ್ತರಿಸಲಿದ್ದು, ನಾನು ಇಲ್ಲದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಾರ್ವಜನಿಕರ ಕರೆಗಳಿಗೆ ಉತ್ತರಿಸಲಿದ್ದಾರೆ. ಸಾರ್ವಜನಿಕರು ಎದುರಿಸುವ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಆಯುಕ್ತರೊಂದಿಗೆ ಹಂಚಿಕೊಳ್ಳಲು ವಿನಂತಿಸಲಾಗಿದೆ.

ಸಾರ್ವಜನಿಕರು ನೇರವಾಗಿ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸಲು ಕೋರಿದೆ 0824-2220801,0824-2220830

Leave a Reply