ಜನ-ಮನ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ

ಜನ-ಮನ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ

ಉಡುಪಿ : ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ‘ಜನಮನ’ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ ಕಾರ್ಯಕ್ರಮವು ಅಕ್ಟೋಬರ್ 21 ರಂದು ಬೆಳಗ್ಗೆ 10.30 ಗಂಟೆಗೆ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸಿ, ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿರುವರು.

ಅತಿಥಿಗಳಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್, ವಿಧಾನ ಪರಿಷತ್‍ನ ಶಾಸಕರು ಹಾಗೂ ವಿಧಾನ ಪರಿಷತ್‍ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ವಿನಯಕುಮಾರ್ ಸೊರಕೆ, ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಗೋಪಾಲ ಪೂಜಾರಿ, ವಿಧಾನಪರಿಷತ್‍ನ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಕೆ.ಪ್ರತಾಪ್‍ಚಂದ್ರ ಶೆಟ್ಟಿ, ನಗರಸಭೆ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನರಸಿಂಹ ಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ನಳಿನಿ ಪ್ರದೀಪ್ ರಾವ್ ಉಪಸ್ಥಿತರಿರುವರು.

Leave a Reply

Please enter your comment!
Please enter your name here