ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಮಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಹಾಗೂ ಸಚಿವ ಕೆ ಜೆ ಜಾರ್ಜ್, ಎ ಎಂ ಪ್ರಸಾದ್, ಪ್ರಣವ್ ಮೊಹಾಂತಿ ಅವರ ಬಂಧನಕ್ಕೆ ಆಗ್ರಹಿಸಿ ದಕ ಬಿಜೆಪಿ ಘಟಕ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಪ್ರತಿಭಟನಾ ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ನುಗ್ಗಿದಾಗ ಜಿಲ್ಲಾಧಿಕಾರಿ ಕಚೇರಿ ಗೇಟ್ ಬಂದು ಮಾಡಿ ಬ್ಯಾರಿಕೆಡ್ ಅಳವಡಿಸಿದರು. ಅದನ್ನು ದೂಡಿ ಒಳನುಗ್ಗಿದ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

bjp-barge-kjgeorge-20160712-022 bjp-barge-kjgeorge-20160712-023 bjp-barge-kjgeorge-20160712-020 bjp-barge-kjgeorge-20160712-019 bjp-barge-kjgeorge-20160712-016 bjp-barge-kjgeorge-20160712-017 bjp-barge-kjgeorge-20160712-018 bjp-barge-kjgeorge-20160712-015 bjp-barge-kjgeorge-20160712-014 bjp-barge-kjgeorge-20160712-013 bjp-barge-kjgeorge-20160712-010 bjp-barge-kjgeorge-20160712-012 bjp-barge-kjgeorge-20160712-011 bjp-barge-kjgeorge-20160712-007 bjp-barge-kjgeorge-20160712-008 bjp-barge-kjgeorge-20160712-009 bjp-barge-kjgeorge-20160712-004 bjp-barge-kjgeorge-20160712-005 bjp-barge-kjgeorge-20160712-006

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕುಳಿತು ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ಧರಣಿ ಕುಳಿತರು. ಬಳಿಕ ಅಪರ ಜಿಲ್ಲಾಧಿಕಾರಿ ಕುಮಾರ್ ಸ್ಥಳಕ್ಕಾಗಮಿಸ ಮನವಿ ಸ್ವೀಕರಿಸಲು ಮುಂದಾದಾಗ ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲಾಧಿಕಾರಿ ಕಚೇರಿಗೆ ಬಂದು ಒಂದು ತಾಸಾದರೂ ಜಿಲ್ಲಾಧಿಕಾರಿ ಬಂದು ಮನವಿ ಸ್ವೀಕರಿಸದ್ದಕ್ಕೆ ಅಪರ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿಭಟನೆಯನಲ್ಲಿ ಮಾತನಾಡಿದ ಸಂಜೀವ ಮಠಂದೂರು ಅವರು ಕೆಜೆ ಜಾರ್ಜ್ ಅವರನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಜಯರಾಮ್ ಶೆಟ್ಟಿ, ಬಿಜೆಪಿ ನಾಯಕರಾದ ಸುಲೋಚನಾ ಭಟ್, ಮೋನಪ್ಪ ಭಂಡಾರಿ, ಸತ್ಯಜಿತ್ ಸುರತ್ಕಲ್, ನಿತಿನ್ ಕುಮಾರ್, ಜಗದೀಶ್ ಅಧಿಕಾರಿ, ಉಮಾನಾಥ್ ಕೋಟ್ಯಾನ್ ಮುಂತಾದವರು ಪಾಲ್ಗೋಂಡಿದ್ದರು.

Leave a Reply

Please enter your comment!
Please enter your name here