ಡಿವೈಎಸ್ಪಿ ಗಣಪತಿ ಆತ್ಮಹತ್ಯೆ; ಎಡಿಜಿಪಿ ಪ್ರತಾಪ್ ರೆಡ್ಡಿ ತಂಡ ನಗರಕ್ಕೆ

ಡಿವೈಎಸ್ಪಿ  ಗಣಪತಿ ಆತ್ಮಹತ್ಯೆ; ಎಡಿಜಿಪಿ ಪ್ರತಾಪ್ ರೆಡ್ಡಿ ತಂಡ ನಗರಕ್ಕೆ

ಮಂಗಳೂರು: ಡಿವೈಎಸ್ಪಿ ಎಂ ಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ಹಸ್ತಾಂತರಿಸಿದ್ದು, ಈ ಹಿನ್ನಲೆಯಲ್ಲಿ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಸಿಐಡಿ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದ ಸಿಐಡಿ ತಂಡ ಶನಿವಾರ ಮಂಗಳೂರಿಗೆ ಆಗಮಿಸಿದೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಮುನ್ನ ಸ್ಥಳೀಯ ಟಿವಿ ಚಾನೆಲೊಂದಕ್ಕೆ ಸಂದರ್ಶನ ನೀಡಿದ್ದು, ಅದರಲ್ಲಿ ಇಬ್ಬರು ಹಿರಿಯ ಪೋಲಿಸ್ ಅಧಿಕಾರಿಗಳು ಹಾಗೂ ಹಿಂದಿನ ಗೃಹ ಸಚಿವ ಕೆ ಜೆ ಜಾರ್ಜ್ ಕಿರುಕುಳ ನೀಡುತ್ತಿದ್ದರು ಎಂದು ಹೇಳಿದ್ದರು.

pratap-reddy-20160709 image001police-20160709-001 image002police-20160709-002

ಆತ್ಮಹತ್ಯೆ ಬಳಿಕ ವಿರೋಧ ಪಕ್ಷಗಳು ಕೆ ಜೆ ಜಾರ್ಜ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿಗೆ ಒತ್ತಡ ಹೇರಿದ್ದು ಅಲ್ಲದೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದರು. ಆದರೆ ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಐಡಿಗೆ ವಹಿಸಿದ್ದರು.

ಈ ನಿಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಪುರಾವೆಗಳನ್ನು ಸಂಗ್ರಹಿಸುವ ಸಲುವುಆಗಿ ಪ್ರತಾಪ್ ರೆಡ್ಡಿ ನಗರಕ್ಕೆ ಭೇಟಿ ನೀಡಿದ್ದಾರೆ.

Leave a Reply