ಡೆಂಗ್ಯು ನಿಯಂತ್ರಣದಲ್ಲಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಶಾ

ಡೆಂಗ್ಯು ನಿಯಂತ್ರಣದಲ್ಲಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಶಾ

ಮ0ಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯು ಸೇರಿದಂತೆ ಸಾಂಕ್ರಾಮಿಕ ರೋಗಗಳು ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿಕಂದರ್ ಪಾಶಾ ತಿಳಿಸಿದ್ದಾರೆ.
2016ನೇ ವರ್ಷದಲ್ಲಿ ಜಿಲ್ಲೆಯಲ್ಲಿ ಇದುವರೆಗೆ 1146 ಸಂಶಯಾಸ್ಪದ ಡೆಂಗ್ಯು ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ 261 ಪ್ರಕರಣಗಳಲ್ಲಿ ಡೆಂಗ್ಯು ದೃಢಪಟ್ಟಿದೆ. ಇದುವರೆಗೆ 6 ಜನರು ಡೆಂಗ್ಯುವಿನಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ.
ಡೆಂಗ್ಯು, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ಸಾಕಷ್ಟು ದಾಸ್ತಾನು ಇಡಲಾಗಿದೆ. ಫಾಗಿಂಗ್ ಸಿಂಪಡಣೆಯನ್ನು ನಡೆಸಲಾಗುತ್ತಿದೆ. ಹೆಚ್ಚು ಡೆಂಗ್ಯು ಪ್ರಕರಣಗಳು ಕಂಡುಬಂದಿರುವಲ್ಲಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದೆ.
ಯಾವುದೇ ರೀತಿಯ ಜ್ವರ ಬಂದರೆ ಸಾರ್ವಜನಿಕರು ಹೆಚ್ಚು ವಿಳಂಭ ಮಾಡದೆ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬೇಕು. ಯಾವುದೇ ಕಾರಣಕ್ಕೂ ಅಕ್ಕಪಕ್ಕ ನೀರು ನಿಲ್ಲಲು ಅವಕಾಶ ನೀಡಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply