ನೇತ್ರಾವತಿ ನದಿಯಲ್ಲಿ ಮುಳುಗಿ ಶ್ರೀನಿವಾಸ್ ಕಾಲೇಜು ವಿದ್ಯಾರ್ಥಿ ಸಾವು

ನೇತ್ರಾವತಿ ನದಿಯಲ್ಲಿ ಮುಳುಗಿ ಶ್ರೀನಿವಾಸ್ ಕಾಲೇಜು ವಿದ್ಯಾರ್ಥಿ ಸಾವು

ಮಂಗಳೂರು:ಬಿಸಿ ರೋಡ್ ಸಮೀಪದ ಕೈಕುಂಜೆ ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಬಿಬಿಎಂ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿ, ರಜನಿಕಾಂತ್ (22) ಎಂದು ಗುರುತಿಸಲಾಗಿದೆ.

Rajnikanth-20-year-old-20160905

ಮೃತ ವಿದ್ಯಾರ್ಥಿ ಗಣೇಶೋತ್ಸವ ಪ್ರಯುಕ್ತ ಕಾಲೇಜಿಗೆ ರಜೆ ಇದ್ದದ್ದರಿಂದ ತನ್ನ ಸ್ನೇಹಿತರ ಜೊತೆ ಬಿಸಿ ರೋಡ್ ಬಳಿಯ ನೇತ್ರಾವತಿ ನದಿಯಲ್ಲಿ ಆಳ ತಿಳಿಯದೆ ಈಜಾಡಲು ತೆರಳೀದ್ದು ಮುಳುಗಿ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಗೆಳೆಯರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿದ್ದು, ಬಂಟ್ವಾಳ ನಗರ ಠಾಣಾಧಿಕಾರಿ ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ,

Leave a Reply