ಪುತ್ತೂರು: ಬೈಕ್ ಲಾರಿ ಡಿಕ್ಕಿ ಸವಾರ ಸಾವು

ಪುತ್ತೂರು: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಪುತ್ತೂರಿನ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಈತನು ಬೊಳುವಾರ್ ಯಮಹಾ ಶೋರೂಮ್ ನಲ್ಲಿ ಕೆಲಸಮಾಡುತ್ತಿದ್ದ ಮೋನಪ್ಪ ಗೌಡರ ಪುತ್ರ ರೋಹಿತ್ (25) ಬನ್ನೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದುರುಗಿ ಬರುತ್ತಿದ್ದ ವೇಳೆ ಮರಳು ತಂಬಿದ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರೋಹಿತ್ ರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ರೋಹಿತರನ್ನು ಆಸ್ಪತ್ರೆಗೆ ಸೇರಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply