ಪ್ರಮೋದ್ ಗೆಲುವಿಗಾಗಿ ದೇವಸ್ಥಾನ, ಚರ್ಚು, ಮಸೀದಿಗಳಲ್ಲಿ ಪ್ರಾರ್ಥನೆ

Spread the love

ಪ್ರಮೋದ್ ಗೆಲುವಿಗಾಗಿ ದೇವಸ್ಥಾನ, ಚರ್ಚು, ಮಸೀದಿಗಳಲ್ಲಿ ಪ್ರಾರ್ಥನೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಅವರ ಗೆಲುವಿಗಾಗಿ ಜಿಲ್ಲೆಯ ವಿವಿಧ ದೇವಸ್ಥಾನ, ಚರ್ಚು, ಮಸೀದಿಗಳಲ್ಲಿ ಕಾಂಗ್ರೆಸ್ –ಜೆಡಿಎಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ , ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ಉಡುಪಿ ಶ್ರೀಕೃಷ್ಣ ಮಠ, ಅನಂತೇಶ್ವರ ದೇವಸ್ಥಾನ, ಕನ್ನಂಗಾರಿನ ಜುಮ್ಮಾ ಮಸೀದಿ, ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನ, ಉಚ್ಚಿಲ ಸೆಕ್ರೇಡ್ ಹಾರ್ಟ್ ಚರ್ಚಿನಲ್ಲಿ, ಅಲೆವೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರಾರ್ಥನೆ ಹಾಗೂ ವಿಶೇಷ ಪೂಜೆಗಳನ್ನು ಸಲ್ಲಿಸಿದರು.

ಈ ವೇಳೆ ಕಾಂಗ್ರೆಸ್ ನಾಯಕರಾದ ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳಕೆಬೈಲ್, ಸುನೀಲ್ ಬಂಗೇರ, ವಿಶ್ವಾಸ್ ಅಮೀನ್, ರಮೇಶ್ ಕಾಂಚನ್, ಹರೀಶ್ ಕಿಣಿ, ಅಝೀಜ್ ಅಹ್ಮದ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love