ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ ; 21 ಆರೋಪಿಗಳಿಗೆ ಸೆ.15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ ; 21 ಆರೋಪಿಗಳಿಗೆ ಸೆ.15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಉಡುಪಿ: ಜಾನುವಾರು ಸಾಗಿಸುತ್ತಿದ್ದ ಎಂಬ ಕಾರಣಕ್ಕೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ನಾಯಕ ಪ್ರವೀಣ್ ಪೂಜಾರಿ ಕೊಲೆ ಪ್ರಕರಣದ ಎಲ್ಲಾ 21 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಉಡುಪಿ ನ್ಯಾಯಾಲಯವು ಆರೋಪಿಗಳಿಗೆ ಸಪ್ಟೆಂಬರ್ 15 ರ ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

praveen-poojary

ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ 19 ಹಾಗೂ ಕೊಲೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ 2 ಮಂದಿಯನ್ನು ಹೆಬ್ರಿ ಪೋಲಿಸರು ಬುಧವಾರ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಲಯ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ರಾಜೇಶ್ ಕರ್ಣನ್ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧಧನದ ಅವಧಿಯನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಿ ಆದೇಶ ನೀಡಿದರು.

Leave a Reply