ಬಂಟ ಕ್ರೀಡೋತ್ಸವ: ಪುತ್ತೂರು, ಎಕ್ಕಾರು ತಂಡಗಳಿಗೆ ಪ್ರಶಸ್ತಿ

ಬಂಟ ಕ್ರೀಡೋತ್ಸವ: ಪುತ್ತೂರು, ಎಕ್ಕಾರು ತಂಡಗಳಿಗೆ ಪ್ರಶಸ್ತಿ

ಮಂಗಳೂರು: ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಬಂಟ್ಸ್ ಹಾಸ್ಟೆಲ್‍ನಲ್ಲಿ ಶ್ರೀರಾಮಕೃಷ್ಣ ಮೈದಾನದಲ್ಲಿ ನಡೆದ ಬಂಟ ಕ್ರೀಡೋತ್ಸವದ ಹಗ್ಗ ಜಗ್ಗಾಟ ಪಂದ್ಯಾಟದ ಪುರುಷರ ವಿಭಾಗದಲ್ಲಿ ಪುತ್ತೂರು ಬಂಟ್ಸ್ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪಡೆಯಿತು. ಮಹಿಳೆಯರ ವಿಭಾಗದಲ್ಲಿ ಎಕ್ಕಾರು ಬಂಟರ ಸಂಘ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಗಳಿಸಿತು.

ಪುರುಷರ ವಿಭಾಗದ ಹಗ್ಗ ಜಗ್ಗಾಟ ಪಂದ್ಯಾಟದಲ್ಲಿ ಮಂಜೇಶ್ವರ ಬಂಟರ ಸಂಘ ದ್ವಿತೀಯ ಸ್ಥಾನಿಯಾದರೆ, ಮಹಿಳೆಯರ ವಿಭಾಗದಲ್ಲಿ ಜಪ್ಪು ಬಂಟರ ಸಂಘ ದ್ವಿತೀಯ ಸ್ಥಾನಿಯಾಗಿ ಪ್ರಶಸ್ತಿ ಪಡೆದುಕೊಂಡಿತು.

Yekkar Bunts

ಪ್ರಶಸ್ತಿ ವಿತರಿಸಿದ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ವಿಜೇತರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಪಂದ್ಯಾಟದ ತೀರ್ಪುಗಾರರನ್ನು ಗೌರವಿಸಲಾಯಿತು. ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಪ್ರತಿಭಾನ್ವೇಷಣೆ ಸಮಿತಿಯ ಸಂಚಾಲಕಿ ಡಾ|ಆಶಾಜ್ಯೋತಿ ರೈ, ಎಂ.ಸುಂದರ ಶೆಟ್ಟಿ, ಕರುಣಾಕರ ಶೆಟ್ಟಿ, ಜಯರಾಮ ಸಾಂತ, ಉಮೇಶ್ ರೈ, ಮಾತೃ ಸಂಘದ ಪದಾಧಿಕಾರಿಗಳು ಹಾಗೂ ಬಂಟರ ವಿವಿಧ ವಲಯದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ಅವರು ಸ್ವಾಗತಿಸಿದರು. ಸುಕೇಶ್ ಚೌಟ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾ ಸಮಿತಿಯ ಸಂಚಾಲಕ ಕಿರಣ್ ಪಕ್ಕಳ ವಂದಿಸಿದರು.

Leave a Reply