ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ದೇಶಪಾಂಡೆ ಪ್ರವಾಸ

ಮ0ಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆಯವರು ಭಾನುವಾರ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ
ಏ. 17 ರಂದು ಬೆ. 8.45 ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬೆ. 10 ಗಂಟೆಗೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಕೆ.ಎಸ್.ಟಿ.ಡಿ.ಸಿ. ಬಸ್‍ಗೆ ಚಾಲನೆ, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ ಗೌರ್ನಿಂಗ್ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಕ್ಕೆ ಎಂ.ಆರ್.ಪಿ.ಎಲ್. ಕಾರ್ಖಾನೆಗೆ ಭೇಟಿ ನೀಡುವರು, ಮಧ್ಯಾಹ್ನ 3 ಗಂಟೆಗೆ ಬಂಟ್ವಾಳ ತಾಲೂಕಿನ ಹಜೀಲಾ ಮೊಗರು ಗ್ರಾಮದ ದರ್ಗಾ ಶರೀಫ್ ಬಳಿ ಯಾತ್ರಿನಿವಾಸ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಬಿಕರ್ಣಕಟ್ಟೆಯಲ್ಲಿ ಬಾಲ ಏಸುವಿನ ಚರ್ಚ್ ಆವರಣದಲ್ಲಿ ಯಾತ್ರಿನಿವಾಸದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ. 5 ಗಂಟೆಗೆ ಮಂಗಳೂರು ನಗರದ ಕದ್ರಿ ಮಂಜುನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಪ್ರವಾಸಿ ಸೌಲಭ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ. 5.30 ರಿಂದ 6.30 ರವರೆಗೆ ಮಂಗಳೂರಿನಲ್ಲಿ ಏರ್ಪಡಿಸಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಗವಹಿಸುವರು. ರಾತ್ರಿ 8 ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಕೇಂದ್ರಸ್ಥಾನಕ್ಕೆ ತೆರಳುವರು.

Leave a Reply