ಬೆಂಗಳೂರು:  ಜುಲೈ 28 ಬಿಬಿಎಂಪಿ ಚುನಾವಣೆಗೆ ಮಹೂರ್ತ ಫಿಕ್ಸ್ ; ಜುಲೈ 31 ಫಲಿತಾಂಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕೊನೆಗೂ ಚುನಾವಣೆ ಮಹೂರ್ತ ಫಿಕ್ಸ್ ಆಗಿದ್ದು, ಜುಲೈ 28ರಂದು ಬಿಬಿಎಂಪಿ ಚುನಾವಣೆ ನಡೆಯಲಿದೆ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

bbmp2

 

ಈ ಕುರಿತು ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಗುರುವಾರದಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು,  ಜುಲೈ 8ರಿಂದ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಜುಲೈ 15ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜುಲೈ 16 ರಂದು ನಾಮಪತ್ರಗಳ ಪರೀಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 20 ಕೊನೆ ದಿನವಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದೆ. ಅಗತ್ಯ ಬಿದ್ದಲ್ಲಿ ಜುಲೈ 30 ರಂದು ಮರು ಮತದಾನಕ್ಕೆ ಅವಕಾಶವಿದ್ದು, ಜುಲೈ 31 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಶ್ರೀನಿವಾಸಾಚಾರಿ ತಿಳಿಸಿದರು.

ಆಗಸ್ಟ್ 5ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ಸುದ್ದಿಗೋಷ್ಠಿ ನಡೆಸಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

Leave a Reply