ಬೆಂಗಳೂರು: ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೌಲಭ್ಯ : ಯುಟಿ ಖಾದರ್

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೌಲಭ್ಯ ಕಲ್ಪಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ಯು ಟಿ ಖಾದರ್ ಹೇಳಿದರು.

ಅವರು ಸುದ್ದಿಗಾರರ ಜೊತೆ ಮಾತನಾಡಿ ರಾಮನಗರ ಹಾಗೂ ಯಾದಗಿರಿಯಲ್ಲಿ ಜಿಲ್ಲಾಸ್ಪತ್ರೆಗಳಿಲ್ಲ ಉಳಿದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ಅಗತ್ಯವಾದ ವೆಂಟಿಲೇಟರ್ ಸ್ಥಾಪಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 22.7 ಕೋಟಿ ರೂ ಮೊತ್ತದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಸದ್ಯದಲ್ಲಿಯೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ಬೀದರ್, ವಿಜಯಪುರ, ಕೊಪ್ಪಳ ಆಸ್ಪತ್ರಗಳಲ್ಲಿ ರೇಡಿಯಾಲಿಜಿ ವಿಭಾಗ ಆರಂಭಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಎಚ್1 ಎನ್ 1 ತಪಾಸಣೆ ಮಾಡುವ ವಿಶೇಷ ಪ್ರಯೋಗಾಲಯ ರಾಜ್ಯದ ನಾನಾ ಕಡೆ ಆರಂಭಿಸಬೇಕೆಂಬ ಬೇಡಿಕೆ ಕೆಲವು ವರ್ಷಗಳಿಂದ ಇತ್ತು. ಮೈಸೂರು, ಮಂಗಳೂರು, ಬಾಗಲಕೋಟೆ, ಹುಬ್ಬಳ್ಳಿ ಬಳ್ಳಾರಿಯಲ್ಲ ಪ್ರಯೋಗಾಲಯವನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಎಚ್1ಎನ್1 ಲ್ಯಾಬಿನಲ್ಲಿ ಎಲ್ಲಾ ರೀತಿಯ ಸಾಂಕ್ರಾಮಿಕ ರೋಗಗಳನ್ನು ಪರೀಕ್ಷಿಸಿಸುವ ಸೌಲಭ್ಯ ಇರಲಿದೆ ಎಂದರು.

ಡೆಂಗೆ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಿದರ ಸಾಕು ಎಂದು ವಿಶ್ವಸಂಸ್ಥೆ ಹೇಳಿದೆ ಹಾಗಿದ್ದರೂ ಕೆಲವು ಖಾಸಗಿ ಆಸ್ಪತ್ರೆಗಳು ರೋಗಿಗಳ ಭಯವನ್ನು ಬಳಸಿಕೊಂಡು ವಿವಿಧ ರೀತಿಯ ಪರೀಕ್ಷೆನಡೆಸುತ್ತಿರುವದರ ಬಗ್ಗೆ ದೂರು ಬಂದಿದ್ದು, ಅಂತಹ ಆಸ್ಪತ್ರೆಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

Leave a Reply