ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನಿರ್ಭಯಾ ಪ್ರಕರಣ ರೀತಿಯಲ್ಲಿ ಕಾಲ್ ಸೆಂಟರ್ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು:  ಕೆಲಸ ಮುಗಿಸ ಮನೆಗೆ ತೆರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಶನಿವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ.

ಶನಿವಾರ ಕೆಲಸ ಮುಗಿಸಿ ಮನೆಗೆ ವಾಪಸ್ ಹೊರಟಿದ್ದ ಕಾಲ್ ಸೆಂಟರ್ ಉದ್ಯೋಗಿ ಮನೆ ಸೇರುವ ತವಕದಲ್ಲಿದ್ದರು. ಬೆಂಗಳೂರಿನ ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮೂವರು ದುಷ್ಕರ್ಮಿಗಳು ಈ ದುಷ್ಕøತ್ಯ ಎಸಗಿದ್ದಾರೆ ಎನ್ನಲಾಗಿದೆ. ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಮಡಿವಾಳದ ಶನಿ ಮಹಾತ್ಮ ದೇವಸ್ಥಾನದ ಬಳಿಗೆ ಟಿಟಿ ಬಂದಿದೆ. ಡ್ರಾಪ್ ಕೊಡುವ ನೆಪದಲ್ಲಿ ಟೆಂಪೋ ಟ್ರಾವೆಲರ್‍ಗೆ ಹತ್ತಿಸಿಕೊಂಡ ದುಷ್ಕರ್ಮಿಗಳು ದೊಮ್ಮಲೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ದುಷ್ಕøತ್ಯ ಮುಗಿಸಿದ ಬಳಿಕ ಆಕೆಯನ್ನು ಕರೆ ತಂದು ವಾಪಸ್ ಇಳಿಸಿದ್ದಾರೆ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ತಕ್ಷಣ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಮಡಿವಾಳ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply