ಭಾರತೀಯ ಜನತಾ ಪಾರ್ಟಿ ಎಸ್.ಟಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಎಸ್.ಟಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಎಸ್.ಟಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು.

bjp-sc-morcha bjp-sc-morcha-jpg

ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಕುಮಾರಿ ಸುಮಿತ್ರ ಕರಿಯ ಉದ್ಘಾಟಿಸಿ ಪ್ರತಿ ಮನೆಯಲ್ಲಿ ಡಾ| ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡತಕ್ಕದ್ದು ಹಾಗೂ ಅವರ ತತ್ವಗಳನ್ನು ಅನುಸರಿಸತಕ್ಕದ್ದು ಎಂದು ಹೇಳಿದರು. ಎಸ್.ಟಿ. ಮೋರ್ಚಾದ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಮಂಜುನಾಥ ಎನ್.ಎಸ್ ರವರು ನೂತನ ಜಿಲ್ಲಾಧ್ಯಕ್ಷರಾದ ರುಕ್ಮಯ್ಯ ನಾಯ್ಕರವರಿಗೆ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಅಧಿಕಾರವನ್ನು ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ ಕೋಟ್ಯಾನ್‍ರವರು ಪ್ರತಿ ಗ್ರಾಮ ಮಟ್ಟದಲ್ಲಿ ಪರಿಶಿಷ್ಟ ಪಂಗಡದವರನ್ನು ಒಗ್ಗೋಡಿಸಿ ಪಕ್ಷದ ಸಿದ್ದಾಂತ ಮತ್ತು ತತ್ವಗಳನ್ನು ಮನವರಿಕೆ ಮಾಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯೂರಪ್ಪರವರ ಅವಧಿಯಲ್ಲಿ ಆಗಿರುವಂತ ಅಭಿವೃದ್ಧಿ ಕೆಲಸಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳುವುದು ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾ| ಬ್ರಿಜೇಶ್ ಚೌಟ ಪಕ್ಷ ಸಂಘಟನೆಯ ಬಗ್ಗೆ ಸಲಹೆಗಳನ್ನು ನೀಡಿದರು.

ಎಸ್.ಟಿಮೋರ್ಚಾ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪರಿಷತ್ ಸದಸ್ಯರಾದ ಕೃಷ್ಣ ನಾಯ್ಕ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ಮಾನಾಡು ಸ್ವಾಗತಿಸಿ, ಓಮಯ್ಯ ನಾಯ್ಕ ವಂದಿಸಿದರು.

Leave a Reply

Please enter your comment!
Please enter your name here