ಮಂಗಳೂರು:ಬೈಕಿಗೆ ಟೆಂಪೋ ಡಿಕ್ಕಿ: ಇಬ್ಬರ ದುರ್ಮರಣ

ಮಂಗಳೂರು: ಮೀನು ಸಾಗಾಟದ ಟೆಂಪೋವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಜ್ಪೆ ಸಮೀಪದ ಹುಣ್ಸೆಕಟ್ಟೆ ಬಳಿ ಈ ಘಟನೆ ನಡೆದಿದ್ದು, ಮಡಿಕೇರಿ ಮೂಲದ ಸಂತೋಷ್(24) ಹಾಗೂ ಬಾಗಲಕೋಟೆಯ ಬಾದಾಮಿ ಮೂಲದ ಶಿವಮೂರ್ತಿ(22) ಮೃತಪಟ್ಟ ದುರ್ದೈವಿಗಳು. ಮೃತರಿಬ್ಬರು ಬಜ್ಪೆ ಸಮೀಪದ ಎಕ್ಕಾರು ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದು ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದು, ಆದರೆ ಟೆಂಪೋದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply