ಮಂಗಳೂರು: ಈದ್ ಮಿಲಾದ್ ಹಬ್ಬದ ಆಚರಣೆ ಸಂಬಂಧ ಸಭೆ

ಮಂಗಳೂರು: ಈದ್ ಮಿಲಾದ್ ಹಬ್ಬದ ನಿಮಿತ್ತ ಸಾರ್ವಜನಿಕ ರಸ್ತೆಗಳಲ್ಲಿ ನಡೆಸಲ್ಪಡುವ ಮೆರವಣಿಗೆಗಳನ್ನು ಶಿಸ್ತುಬದ್ದಗೊಳಿಸುವ ನಿಟ್ಟಿನಲ್ಲಿ ಹಾಗೂ ಜಿಲ್ಲೆಯಲ್ಲಿ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮತ್ತು ಯಾವುದೆ ಸಾರ್ವಜನಿಕರಿಗೆ ತೊಡಕಾಗದಂತೆ ಜಾಥಾ ಮತ್ತು ಮೆರವಣಿಗೆಗಳನ್ನು ನಡೆಸಲು ಸಭೆಯಲ್ಲಿ ಹಾಜರಿದ್ದ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ದಕ್ಕೆಯಾಗದಂತೆ ಕೇವಲ ಕಾಲ್ನಡಿಗೆ ಮೆರವಣಿಗೆಯನ್ನು ಸಂಬಂಧಪಟ್ಟ ಜಮಾಅತ್ ವ್ಯಾಪ್ತಿಗೆ ಸೀಮೀತಿಗೊಳಿಸಬೇಕು ಮೆರವಣಿಗೆ ನಡೆಸುವ ಮೊದಲು ಪೋಲಿಸ್ ಇಲಾಖೆಗೆ ಸೂಕ್ತ ಮಾಹಿತಿ ನೀಡಿ ಸೂಕ್ತ ಅನುಮತಿ ಪಡೆಯಬೇಕು. ಅಲ್ಲದೆ ಯಾವುದೇ ರೀತಿಯ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರೆತೆ ವಹಿಸಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Leave a Reply

Please enter your comment!
Please enter your name here