ಮಂಗಳೂರು: ಎತ್ತಿನ ಹೊಳೆ ಯೋಜನೆ ವಿರೋಧಿಸಿ ಸಂಸದ ನಳಿನ್ ಕುಮಾರ್ ಕಾಲ್ನಡಿಗೆ ಜಾಥಾಕ್ಕೆ ಅಜಿತ್ ಕುಮಾರ್ ರೈ ಬೆಂಬಲ

ಮಂಗಳೂರು: ಎತ್ತಿನ ಹೊಳೆ ಯೋಜನೆ ವಿರುದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೈಗೊಂಡಿರುವ ಬೃಹತ್ ಕಾಲ್ನಡಿಗೆ ಜಾಥಾಗೆ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್‍ಕುಮಾರ್ ರೈ ಮಾಲಾಡಿ ಅವರು ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಿಂದ ಎತ್ತಿನ ಹೊಳೆಗೆ ನಡೆಯುವ ಬೃಹತ್ ಕಾಲ್ನಡಿಗೆ ಜಾಥಾ ಹೋರಾಟವನ್ನು ತಾವು ಬೆಂಬಲಿಸುವುದಾಗಿ ರೈ ತಿಳಿಸಿದ್ದಾರೆ. ಎತ್ತಿನ ಹೊಳೆ ಯೋಜನೆ ವಿರುದ್ಧ ಯಾವುದೇ ಸಂಘ ಸಂಸ್ಥೆಗಳು ನಡೆಸುವ ಹೋರಾಟವನ್ನು ಬೆಂಬಲಿಸುವುದಾಗಿ ಅವರು ತಿಳಿಸಿದ್ದಾರೆ.

ಈ ಯೋಜನೆಯಿಂದ ಕೈಗಾರಿಕೆಗಳಿಗೆ, ನೂರಾರು ವಿದ್ಯಾ ಸಂಸ್ಥೆಗಳಿಗೆ ಜಿಲ್ಲೆಯಲ್ಲಿರುವ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರು ಇಲ್ಲದಂತಹ ಸ್ಥಿತಿ ನಿರ್ಮಾಣವಾಗಬಹುದು. ಈ ಯೋಜನೆಯಿಂದ ನೇತ್ರಾವತಿ ಬರಡಾದರೆ ಕೃಷಿ ಭೂಮಿ ಮರುಭೂಮಿಯಾಗಬಹುದು. ಇಂತಹ ಅಪಾಯದ ವಿರುದ್ಧ ಹೋರಾಟ ಅನಿವಾರ್ಯ ಎಂದು ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.

Leave a Reply