ಮಂಗಳೂರು: ಕಾಂಗ್ರೆಸಿಗೆ ಯುವಕರನ್ನು ಸೆಳೆಯಲು ದ.ಕ. ಯೂತ್ ಕ್ರಾಂಗ್ರೆಸ್ ಕಾರ್ಯಕ್ರಮ; ಮಿಥುನ್ ರೈ

ಮಂಗಳೂರು: ದ.ಕ.ಜಿಲ್ಲಾ ಯುವಕಾಂಗ್ರೆಸ್ಸಿನ ಕಾರ್ಯಕಾರಿಣಿ ಸಭೆಯು ಇತ್ತೀಚೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಅಧ್ಯಕ್ಷತೆಯಲ್ಲಿ ನಡೆಯಿತು.

dkyouthcongmeet 27-07-2015 14-59-08 dkyouthcongmeet 27-07-2015 15-00-44 dkyouthcongmeet 27-07-2015 15-05-23 dkyouthcongmeet 27-07-2015 15-14-36 dkyouthcongmeet 27-07-2015 15-15-06

ಈ ಸಭೆಗೆ ಕರ್ನಾಟಕ ಯುವ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ನಟರಾಜ್ ಗಾಣಕಲ್ , ರಾಷ್ಟ್ರೀಯ ಯುವ ಕಾರ್ಯದರ್ಶಿ ರವೀಂದ್ರ ದಾಸ್ ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ, ಗೌರವಕ್ಕೆ ತಕ್ಕಂತೆ ಕಾರ್ಯಕ್ರಮ ರೂಪುರೇಷೆ ಮಾಡಬೇಕು ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರದ ಖಾಲಿ ಇರತಕ್ಕಂತಹ ಪದಾಧಿಕಾರಿಗಳನ್ನು ನೇಮಕ ಮಾಡಲು ಆದೇಶ ನೀಡುವುದು. ಹಾಗು ಮುಂದೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಯುವ ಕಾಂಗ್ರೆಸ್ಸಿಗೆ ಯುವಕರನ್ನು ಸೆಳೆಯುವಂತೆ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲೂಕ್‍ಮಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಬುಡ್ಲೆಗುತ್ತು, ಸುಹೈಲ್, ಸೋಯಿಬ್, ಶ್ರೀಹರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Please enter your comment!
Please enter your name here