ಮಂಗಳೂರು: ಕೋಮು ಹಿಂಸೆಗೆ ಪ್ರಚೋದನೆ ನೀಡಿದ ಸಂಸದ ಅನಂತ ಕುಮಾರ್ ಹಗ್ಡೆ ವಿರುದ್ದ ಕ್ರಮಕ್ಕೆ ಇಮಾಮ್ಸ್ ಕೌನ್ಸಿಲ್ ಅಗ್ರಹ

ಮಂಗಳೂರು: ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ಎಲ್ಲಾ ಜಾತಿ ಮತ ಧರ್ಮದವರನ್ನು ಸಮಾನವಾಗಿ ಕಾಣಬೇಕಾದದ್ದು ಒಬ್ಬ ಜನಪ್ರತಿನಿಧಿಯ ಕರ್ತವ್ಯವಾಗಿದೆ . ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕ ನೀಡುತ್ತಾ ಕೋಮು ಹಿಂಸೆಗೆ ಪ್ರಚೋದನೆ ನೀಡುತ್ತಿರುವ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹಗ್ಡೆಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರಿಸ್ ಹನೀಫಿ ಅವರು ಪತ್ರಿಕಾ ಪ್ರಕಟನೆಯಲ್ಲಿ ಸರಕಾರವನ್ನು ಒತ್ತಾಯಿಸಿದ್ದಾರೆ .

ಮೌಲ್ಯಗಳನ್ನು ಬಲವಾಗಿ ಪ್ರತಿಪಾದಿಸುವ ಇಸ್ಲಾಂ ಧರ್ಮದ ಬಗ್ಗೆ ಈ ರೀತಿಯ ಆರೋಪ ಹೋರಿಸಿರುವುದು ಸಂಘಪರಿವಾರದ ಫ್ಯಾಶಿಷ್ಟ್ ಚಿಂತನೆಯ ಭಾಗವಾಗಿದೆ . ಈ ಹೇಳಿಕೆಯ ಮೂಲಕ ಮುಸ್ಲಿಮರ ಬಗೆಗಿನ ಬಿಜೆಪಿಯ ನಿಲುವು ಮತ್ತೊಮ್ಮೆ ಸಾಬೀತಾಗಿದೆ. ಆದುದರಿಂದ ಇದರ ವಿರುಧ್ಧ ಎಲ್ಲಾ ಜಾತ್ಯಾತೀತ ಶಕ್ತಿಗಳು ಒಂದಾಗಿ ಹೋರಾಟ ನಡೆಸಬೇಕಾಗಿದೆ. ದೇಶದ ಜನರ ಮುಂದೆ ಕ್ಷಮೆ ಯಾಚಿಸಬೇಕುಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರಿಸ್ ಹನೀಫಿ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

Leave a Reply