ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಹಾಗೂ ಜೆರಾಕ್ಸ್ ಅಂಗಡಿಗೆ ನುಗ್ಗಿದ ಲಾರಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೋಟೆಲ್ ಹಾಗೂ ಜೆರಾಕ್ಸ್ ಅಂಗಡಿಗೆ ನುಗ್ಗಿದ ಘಟನೆ ಮುಕ್ಕ ಬಳಿ ಜುಲೈ 15 ರಂದು ನಡೆದಿದೆ.

5-lorry-acident-004 4-lorry-acident-003

ಮುಕ್ಕದಿಂದ ಸುರತ್ಕಲ್ ಕಡೆಗೆ ಸಾಗುತ್ತಿದ್ದ ಲಾರಿಯೊಂದು ಮುಕ್ಕ ಬಳಿಗೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಚಾಲಕನು ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದ ಜೆರಾಕ್ಸ್ ಹಾಗೂ ಹೋಟೆಲ್ ಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ. ಪರಿಣಾಮ ಗಣೇಶ್ ಹೋಟೆಲ್ ಹಾಗೂ ಜೆರಾಕ್ಸ್ ಅಂಗಡಿ ಧ್ವಂಸಗೊಂಡಿದ್ದು ಲಾರಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply