ಮಂಗಳೂರು : ಜಿಲ್ಲಾ ಕಾರಾಗೃಹ ಆವರಣದಲ್ಲಿ “ವಿಶ್ವ ಪರಿಸರ ದಿನಾಚರಣೆ”

ಮಂಗಳೂರು :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು, ಮಂಗಳೂರು ವಕೀಲರ ಸಂಘ ಮತ್ತು ಜಿಲ್ಲಾ ಕಾರಾಗೃಹ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05-06-2015 ರಂದು ಜಿಲ್ಲಾ ಕಾರಾಗೃಹ ಆವರಣದಲ್ಲಿ, ಮಂಗಳೂರು ಇಲ್ಲಿ “ವಿಶ್ವ ಪರಿಸರ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿತ್ತು.

unnamed

 

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಗಣೇಶ. ಬಿ., ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು ರವರು ಜಿಲ್ಲಾ ಕಾರಾಗೃಹ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಾ. ಮುರಳಿ ಮೋಹನ ಚೂಂತಾರು, ಕಮಾಡೆಂಟ್, ಜಿಲ್ಲಾ ಗೃಹ ರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರುರವರು ಮತ್ತು ಶ್ರೀ ಬಿ.ಟಿ. ಓಬಳೇಶಪ್ಪ, ಅಧೀಕ್ಷಕರು, ಜಿಲ್ಲಾ ಕಾರಾಗೃಹ, ಮಂಗಳೂರು, ಶ್ರೀ ಮಾಧವ, ಪರಿಸರವಾದಿ, ಮಂಗಳೂರು ಹಾಗೂ ಶ್ರೀ ಎಸ್.ಪಿ. ಚಂಗಪ್ಪ, ಅಧ್ಯಕ್ಷರು, ಮಂಗಳೂರು ವಕೀಲರ ಸಂಘರವರು ಭಾಗವಹಿಸಿ ಗಿಡ ನೆಡುವ ಮುಖಾಂತರ ಮತ್ತು ಬೀಜ ಬಿತ್ತುವ ಮುಖಾಂತರ ಶುಭ ಹಾರೈಸಿದರು. ಕಾರಾಗೃಹ ಬಂಧಿಗಳು ಈ ಕಾರ್ಯಕ್ರಮದಲ್ಲಿ  ಸಕ್ರಿಯವಾಗಿ ಪಾಲ್ಗೊಂಡು, ಅವರ ಕ್ಷಮತೆಯನ್ನು ಮೆರೆದಿರುತ್ತಾರೆ.

ಕಾರ್ಯಕ್ರಮವನ್ನು ನಿಟ್ಟೆ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.

Leave a Reply

Please enter your comment!
Please enter your name here