ಮಂಗಳೂರು : ತಮಿಳುನಾಡಿನ ಪ್ರವಾಹ ಪೀಡಿತರಿಗೆ ಸಹಾಯ ಹಸ್ತ

 ಮಂಗಳೂರು:  ತಮಿಳುನಾಡಿನ ಚೆನೈ, ಕಾಂಚಿಪುರಂ, ತಿರುವಲ್ಲೂರು ಹಾಗು ಕುಡ್ಡಲೂರು ಜಿಲ್ಲೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀಕರ ಪ್ರವಾಹ ಅಪ್ಪಳಿಸಿ ಅಲ್ಲಿನ ಸಾರ್ವಜನಿಕರಿಗೆ ಮತ್ತು ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗಿರುತ್ತದೆ. ಈ ಸಂಬಂಧವಾಗಿ ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಅನೇಕ  ಸಂಘ-ಸಂಸ್ಥೆಗಳು, ವೈದ್ಯಕೀಯ ಸಂಸ್ಥೆಗಳು, ವೈದ್ಯರುಗಳು ಹಾಗು  ಸಾರ್ವಜನಿಕರು ಮುಂದೆ ಬರುವಂತೆ ಜಿಲ್ಲಾಧಿಕಾರಿ ಹಾಗೂ ಅದ್ಯಕ್ಷರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕ ಮಂಗಳೂರು ರವರು ಮನವಿ ಮಾಡಿರುತ್ತಾರೆ.

ಆಸಕ್ತರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಮುಖಾಂತರ ಸಹಾಯ  ಮಾಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಅದ್ಯಕ್ಷರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕ ಮಂಗಳೂರು  ರವರು   ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Leave a Reply