ಮಂಗಳೂರು: ನಗರದಲ್ಲಿ ಅನೈತಿಕ ಪೋಲಿಸ್ ಗಿರಿ: ಹಿಂದೂ ಯುವತಿಯೊಂದಿಗಿದ್ದ ಮುಸ್ಲಿಂ ಯುವಕನನ್ನು ಥಳಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಮಂಗಳೂರು: ನಗರದ ಅತ್ತಾವರದಲ್ಲಿ ಸೋಮವಾರ ಅನೈತಿಕ ಪೋಲಿಸ್ ಗಿರಿ ವರದಿಯಾಗಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಮುಸ್ಲಿಂ ಯುವಕನೋರ್ವನಿಗೆ ಅನ್ಯಕೋಮಿನ ಯುವತಿಯೊಂದಿಗೆ ತಿರುಗುತ್ತಿರುವುದಕ್ಕೆ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ.

Shakir (2) Shakir (1)

ಪೋಲಿಸ್ ಮೂಲಗಳ ಪ್ರಕಾರ 28 ವರ್ಷ ವಯಸ್ಸಿನ ಮುಸ್ಲಿಂ ಸಮುದಾಯದ ಯುವಕನೋರ್ವನಿಗೆ ಅನ್ಯಸಮುದಾಯದ ಯುವತಿಯೊಂದಿಗೆ ಸ್ನೇಹವಿದ್ದು, ಇಬ್ಬರು ಕೂಡ ಕಾರಿನಲ್ಲಿ ಹೋಗುತ್ತಿರುವುದನ್ನು ಗಮನಿಸಿದ ಹಿಂದು ಸಂಘಟನೆಯ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ, ಯುವಕನನ್ನು ಕಾರಿನಿಂದ ಹೊರಗೆಳೆದು ಬಟ್ಟೆಗಳನ್ನು ಹರಿದು, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪಾಂಡೇಶ್ವರ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಸ್ಲಿಂ ಯುವಕ ಹಾಗೂ ಯುವತಿ ನಗರದ ಸೂಪರ್ ಮಾರ್ಕೆಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಒರ್ವನನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

Leave a Reply

Please enter your comment!
Please enter your name here