ಮಂಗಳೂರು: ಪತ್ನಿ, ಮಕ್ಕಳನ್ನು ಕೊಂದು ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

ಮಂಗಳೂರು : ಗ್ರಾಮ ಪಂಚಾಯತ್ ಸದಸ್ಯನೊಬ್ಬ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂಟ್ವಾಳ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮೃತಪಟ್ಟವರನ್ನು ಮಂಚಿ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ನಾಯಕ್, ಪುಷ್ಪಾವತಿ, ಪೃಥ್ವಿ (6) ಮತ್ತು ಪೂರ್ವಿ (4) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ನಾಲ್ವರ ಶವ ರಕ್ತದ ಮಡುವಿನಲ್ಲಿ ಮನೆಯಲ್ಲಿ ಪತ್ತೆಯಾಗಿದೆ.

3-bantwal-002

ಪದ್ಮನಾಭ ನಾಯಕ್ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ್ದು, ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮನಾಭ ನಾಯಕ್ ಹೆಂಡತಿ ಮಕ್ಕಳನ್ನು ಕೊಲೆ ಮಾಡಲು ಕಾರಣವೇನು? ಎಂಬುದು ತಿಳಿದುಬಂದಿಲ್ಲ.

ಕೆಲ ಸಮಯದಿಂದ ಅನಾರೋಗ್ಯ ಪೀಡಿತನಾಗಿದ್ದ ಪದ್ಮನಾಭ ನಾಯಕ್ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಪ್ರಾಥಮಿಕವಾಗಿ ಲಭ್ಯವಾಗಿದೆ.
ಪದ್ಮನಾಭ ನಾಯಕ್ ಅವರ ನಿವಾಸದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಜೀವವಿಮೆ ಹಣವನ್ನು ತನ್ನ ತಾಯಿಗೆ ತಲುಪಿಸಿ ಎಂದು ಅವರು ಬರೆದಿಟ್ಟಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂಟ್ವಾಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Please enter your comment!
Please enter your name here