ಮಂಗಳೂರು: ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲು ಬ್ಯಾಂಕ್ ಬದ್ಧ – ರಘುರಾಮ್

ಮಂಗಳೂರು: ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ಸ್ಪಂದಿಸಲು ಹಾಗೂ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೆ ಕರ್ನಾಟಕ ಬ್ಯಾಂಕ್ ಸದಾ ಶ್ರಮಿಸುತ್ತಿದೆ ಎಂದು ಬ್ಯಾಂಕಿನ ಮಹಾ ಪ್ರಬಂಧಕರಾದ ರಘುರಾಮ್ ಆಶ್ವಾಸನೆ ನೀಡಿದರು.

1-karnataka-bank 2-karnataka-bank-001

ನಗರದ ದ.ಕ.ಜಿ.ಪ ಕೋಡಿಕಲ್ ಶಾಲೆಯ ಸಭಾಂಗಣದಲ್ಲಿ ತಾ. 01-10-2015 ರಂದು ಶೀಲ್ಡ್ ಪ್ರತಿಷ್ಠಾನದ ಆಶ್ರಯದಲ್ಲಿ ಜರಗಿದ “ವಿದ್ಯಾರ್ಥಿಗಳಿಗೆ ಉಚಿತ ಕೊಡೆಗಳ ವಿತರಣಾ” ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಮತ್ತು  ಶಿಕ್ಷಕ ವೃಂದದವರನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸದಾ ಶ್ರಮಿಸಬೇಕು ಎಂದು ಸಲಹೆ ನೀಡಿದರು. ಶೀಲ್ಡ್ ಸಂಸ್ಥೆಯ ಸಮಾಜ ಸೇವಾ ಚಟುವಟಿಕೆಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡುವ ಭರವಸೆ ನೀಡಿದರು. ಬಳಿಕ ಬ್ಯಾಂಕಿನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಗಳ ಅನ್ವಯ 175 ವಿದ್ಯಾರ್ಥಿಗಳಿಗೆ ಉಚಿತ ಕೊಡೆಗಳ ಭಾಗ್ಯ ನೀಡಿದರು.

ರೋಟರಿ ವಲಯ ಅಧಿಕಾರಿ ರೊ. ರಾಜ್ ಗೋಪಾಲ್ ರೈ, ಇಂದಿನ ವಿದ್ಯಾರ್ಥಿಗಳು ದೇಶದ ಮುಂದಿನ ಭವಿಷ್ಯವಾಗಿದ್ದು ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕೆಂದು ಶಿಕ್ಷಕರಿಗೆ ಸಲಹೆ ನೀಡಿದರು. ಕರ್ನಾಟಕ ಬ್ಯಾಂಕಿನ ಮುಖ್ಯ ಪ್ರಭಂದಕ ಶ್ರೀನಿವಾಸ್ ದೇಶಪಾಂಡೆ, ಶಿಕ್ಷಕ ಮತ್ತು ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ. ಶಶಿಕಲ ಯವರು ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಸಾರ್ವಜನಿಕ ಸಂಪರ್ಕಾಧಿಕಾರಿ ಎಂ. ವಿ. ಮಲ್ಯ ಶೀಲ್ಡ್ ಪ್ರತಿಷ್ಠಾನದ ಅಧ್ಯಕ್ಷ ಧರ್ಮಿತ್ ರೈ, ಕಾರ್ಯದರ್ಶಿ ವರ್ಧನ್ ಪೈ, ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಶ್ರೀ. ಜಯಪ್ಪ, ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ. ನಿರ್ಮಲ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮೀ ವಂದಿಸಿದರು. ಈ ಸಂದರ್ಭದಲ್ಲಿ ಶೀಲ್ಡ್ ಪ್ರತಿಷ್ಠಾನ ಸಂಸ್ಥೆಯವರು ಗಾಂಧಿ ಜಯಂತಿಯ ಪ್ರಯುಕ್ತ ಮಕ್ಕಳಿಗೆ ಬಿಸ್ಕ್‍ಟು ಮತ್ತು ಚಾಕ್‍ಲೇಟ್‍ಗಳನ್ನು ವಿತರಿಸಿದರು.

Leave a Reply