ಮಂಗಳೂರು: ಭಾರತ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಬೆಂಕಿ: ಅಪಾರ ನಷ್ಟ

ಮಂಗಳೂರು : ನಗರದ ಸೆಂಟ್ರಲ್ ಮಾರುಕಟ್ಟೆ ಬಳಿಯ ಬಟ್ಟೆ ಅಂಗಡಿ ಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಬುಧವಾರ ಸಂಜೆ ನಡೆದಿದೆ.

market-road-shop-fire-20150902-001

ಸೆಂಟ್ರಲ್ ಮಾರುಕಟ್ಟೆ ರಸ್ತೆಯಲ್ಲಿರುವ ಭಾರತ್ ಕಲೆಕ್ಷನ್ ಎಂಬ ಬಟ್ಟೆ ಅಂಗಡಿಯಲ್ಲಿ ಇಂದು ಸಂಜೆ 5 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿತ್ತಾದರೂ ಅದಾಗಲೇ ಅಂಗಡಿಯಲ್ಲಿ ಬೆಲೆಬಾಳುವ ಬಟ್ಟೆಗಳು, ಇತರ ಸಾಮಗ್ರಿಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಬಂದರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply