ಮಂಗಳೂರು : ಮಾರ್ಚ್ 12 ರಂದು ಅಂಗಾಂಗ ದಾನ ಕುರಿತು ಮಾಹಿತಿ ಕಾರ್ಯಗಾರ

ಮಂಗಳೂರು: ಕರಾವಳಿಯ ಅಂತರ್ಜಾಲ ಸುದ್ದಿ ಮಾಧ್ಯಮ ಮ್ಯಾಂಗಲೋರಿಯನ್ ಡಾಟ್ ಕಾಮ್ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಅಂಗಾಂಗ ದಾನ ಕುರಿತು ಮಾಹಿತಿ ಕಾರ್ಯಗಾರವನ್ನು ಮಾರ್ಚ್ 12 ರಂದು ಶನಿವಾರ ಬೆಳಿಗ್ಗೆ 10.30 ಕ್ಕೆ ರೊಸಾರಿಯೊ ಹಾಲ್ ಮಂಗಳೂರಿನಲ್ಲಿ ಆಯೋಜಿಸಲಾಗಿದೆ.

invite-organ-donation

ಮಾಹಿತಿ ಕಾರ್ಯಗಾರವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಉದ್ಘಾಟಿಸಲಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅಂಗಾಂಗ ದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮ್ಯಾಂಗಲೋರಿಯನ್ ಡಾಟ್ ಕಾಮ್ ಇದರ ನೂತನ ವಿನ್ಯಾಸದೊಂದಿಗೆ ತಯಾರಿಸಿದ ವೆಬ್‍ಸೈಟಿಗೆ ಮಂಗಳೂರು ದಕ್ಷಿಣ ಶಾಸಕ ಜೆ ಆರ್ ಲೋಬೊ ಚಾಲನೆ ನೀಡಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಮ್ಯಾಂಗಲೋರಿಯನ್ ಡಾಟ್ ಕಾಮ್ ಇದರ ನೂತನ ಲಾಂಛನವನ್ನು ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಸಿಂತಾ ವಿಜಯ್ ಆಲ್ಫ್ರೆಡ್ ವಹಿಸಲಿದ್ದಾರೆ. ಕೆಎಂಸಿ ಆಸ್ಪತ್ರೆಯ ವ್ಯೆದ್ಯರಾದ ಜಿ ಜಿ ಲಕ್ಷ್ಮಣ್ ಪ್ರಭು ಅಂಗಾಂಗ ದಾನ ಕುರಿತು ಮಾಹಿತಿ ನೀಡಿಲಿದ್ದು, ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಅಂಗಾಂಗ ದಾನದ ಪ್ರತಿಜ್ಞೆಯನ್ನು ಕೈಗೊಳ್ಳಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply