ಮಂಗಳೂರು: ಮಾರ್ಚ್ 5 -ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಭೆ

ಮಂಗಳೂರು: ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಂಘ (ರಿ.) ಬೆಂಗಳೂರು ಇದರ ಆಶ್ರಯದಲ್ಲಿ ಮಾರ್ಚ್ 5 ಮಧ್ಯಾಹ್ನ 2.15 ಕ್ಕೆ ಸರಕಾರಿ ಪದವಿಪೂರ್ವ ಕಾಲೇಜು ಬಲ್ಮಠ ಇಲ್ಲಿ ಮಂಗಳೂರು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರಕಾರಿ ಎನ್.ಪಿ.ಎಸ್ ನೌಕರರ ಸಮಾಲೋಚನಾ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ರಾಜ್ಯ ಸಂಘದ ಉಪಾಧ್ಯಕ್ಷರಾದ ಸಿದ್ಧಪ್ಪ ಸಂಗಣ್ಣನವರ್ ಭಾಗವಹಿಸಲಿದ್ದು, ಹೊಸ ಪಿಂಚಣಿ ಯೋಜನೆಯ ಲೋಪದೋಷಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಈ ಸಭೆಗೆ ಮಂಗಳೂರು (ಕಂದಾಯ) ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರು ಭಾಗವಹಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ಸಂತೋಷ್, ಉಪನ್ಯಾಸಕರು (9449208516), ರವಿ ಎಸ್ ಪೂಜಾರಿ (9483458458) ಇವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Please enter your comment!
Please enter your name here