ಮಂಗಳೂರು: ಯುವಕನನ್ನು ಕಾರಿನಲ್ಲಿ ಬೆನ್ನಟ್ಟಿ ತಲವಾರಿನಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಯುವಕನನ್ನು ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕಾರಿನಲ್ಲಿ ಬೆನ್ನಟ್ಟಿದ್ದ ತಂಡವೊಂದು ತಲವಾರಿನಿಂದ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಸಂತೋಷ್ ನಗರದ ಪಂಡಿತ ಹೌಸ್ ನಿವಾಸಿ ಲ್ಯಾನ್ಸಿ ಡಿ’ಸೋಜಾ(32) ಎಂದು ಗುರುತಿಸಲಾಗಿದೆ.

ಪೋಲಿಸ್ ಮೂಲಗಳ ಪ್ರಕಾರ ಲ್ಯಾನ್ಸಿ ಅವರು ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಚೆಂಬುಗುಡ್ಡೆ ಎಂಬಲ್ಲಿ ತಲುಪಿದ ವೇಳೆ ಹಿಂದಿನಿಂದ ಸ್ವಿಫ್ಟ್ ಕಾರಿನಲ್ಲಿ ಬೆನ್ನಟ್ಟಿಕೊಂಡು ಬಂದ ದುಷ್ಕರ್ಮಿಗಳು ಲ್ಯಾನ್ಸಿ ಅವರ ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದು, ಲ್ಯಾನ್ಸಿ ಕೆಳಗೆ ಬೀಳುತ್ತಲೆ ಆತನ ಮೇಲೆ ತಲವಾರಿನಿಂದ ಮಾರಣಾಂತಿಕವಾಗಿ ಧಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಲ್ಯಾನ್ಸಿ ಅವರ ಕೈ ತಲೆ ಇನ್ನಿತರ ಭಾಗಗಳಿಗೆ ಗಂಬೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆ ಗೆದಾಖಲಿಸಲಾಗಿದೆ. ಮೂಲಗಳ ಪ್ರಕಾರ . ಲ್ಯಾನ್ಸಿ ಹಾಗೂ ದುಷ್ಕರ್ಮಿಗಳ ಮಧ್ಯೆ ವೈಯಕ್ತಿಕ ದ್ವೇಷವಿದ್ದು ಈ ಹಿನ್ನೆಲೆಯಲ್ಲಿ ಘಟನೆ ನಡೆದಿರಬೇಕೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply