ಮಂಗಳೂರು: ವೈದ್ಯ ವಿದ್ಯಾರ್ಥಿಗಳ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಒರ್ವ ಗಂಭೀರ, ಇತರ ನಾಲ್ವರಿಗೆ ಗಾಯ

ಮಂಗಳೂರು: ವೈದ್ಯ ವಿದ್ಯಾರ್ಥಿಗಳ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ, ಇತರ ನಾಲ್ವರು ಗಾಯಗೊಂಡ ಘಟನೆ ದೇರಳಕಟ್ಟೆಯ ನಿತ್ಯಾನಂದ ನಗರ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಕೇರಳ ಮೂಲದ ಮ್ಯಾಥ್ಯು ವರ್ಗಿಸ್ (21), ಜಾರ್ಜ್ ರೋಹನ್, ಕೌಶಿಕ್ ಥೋಮಸ್, ಸಂಶದ್ ಮತ್ತು ರಾಜೀವ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಮ್ಯಾಥ್ಯೂ ವರ್ಗೀಸ್ ಸ್ಥಿತಿ ಚಿಂತಾಜನಕವಾಗಿದ್ದು, ಇತರ ನಾಲ್ವರು ಕೂಡ ಗಂಭೀರ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಐವರು ವಿದ್ಯಾರ್ಥಿಗಳು ದೇರಳಕಟ್ಟೆಯ ಬಾರೊಂದರಲ್ಲಿ ಊಟವನ್ನು ಮುಗಿಸಿ ಕುತ್ತಾರು ಕಡೆಗೆ ತೆರಳುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಫಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಉಳ್ಳಾಲ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply